ಎಬಿವಿಪಿ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ : ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Parameshwarಕೊರಟಗೆರೆ, ಆ.21-ಎಬಿವಿಪಿ ನಡೆಸಿದ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ಯಾವುದೇ ಕಾಲೇಜುಗಳಿಗೆ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ದಿಢೀರ್ ಪ್ರತಿಭಟನೆಯಿಂದ ಉಂಟಾದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ ಎಂದು ಲಾಠಿ ಚಾರ್ಜ್ನ್ನು ಸಮರ್ಥಿಸಿಕೊಂಡಿದ್ದಾರೆ.  ಕೊರಟಗೆರೆ, ಮಧುಗಿರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಅದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಮೇಲೆ ಲಾಠಿ ಜಾರ್ಜ್ ಮಾಡುವಂತೆ ಯಾವುದೇ ಆದೇಶ ನಾವು ನೀಡಿಲ್ಲ. ಆದರೆ ಸ್ಥಳೀಯ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಈ ಕ್ರಮ ಜರುಗಿಸಿದ್ದಾರೆ. ದಿಢೀರ್ ಪ್ರತಿಭಟನೆ ನಡೆಸಿದರೆ, ಟ್ರಾಫಿಕ್ ಜಾಮ್, ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಪೊಲೀಸರು ಎದುರಾಗುವ ಪರಿಸ್ಥಿತಿ ನಿಭಾಯಿಸಲು ಎಂದು ಲಾಠಿ ಕೈಗೆ ತೆಗೆದುಕೊಂಡಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ನಾವು ಯಾವುದೇ ಕಾಲೇಜುಗಳಿಗೆ ಪತ್ರ ಬರೆದಿಲ್ಲ. ಆದರೆ ಬಲವಂತವಾಗಿ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಕರೆದೊಯ್ದಿದ್ದಾರೆ ಎಂದು ಕೆಲ ಕಾಲೇಜು ಆಡಳಿತ ಮಂಡಳಿ ದೂರು ನೀಡಿದ್ದಾರೆ. ಆ ದೂರಿನನ್ವಯ ಸರ್ಕಾರ ಕ್ರಮಕೈಗೊಳ್ಳುತ್ತದೆ. ಆಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆ ನಡೆಸಿದ ಕಾರ್ಯಕ್ರಮದ ಸಂಬಂಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಿದೆ ಎಂದುಹೇಳಿದರು.  ತುಮಕೂರು ಕಾಲೇಜೊಂದರಲ್ಲಿ ವಿದ್ಯಾರ್ಥಿಯೊಬ್ಬ ದೇಶವಿರೋಧಿ ಘೋಷಣೆ ಕೂಗಿದನೆಂದು ಸೆಕ್ಯೂರಿಟಿ ಗಾರ್ಡ್ನ ದೂರಿನನ್ವಯ ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.   ಆತನ ಮೇಲಿನ ಆರೋಪಿ ಇನ್ನೂ ಸಾಬೀತಾಗಿಲ್ಲ. ಅಂದಿನ ಘಟನೆಗಳ ಬಗ್ಗೆ ಸಿಸಿ ಟಿವಿ ದೃಶ್ಯಾವಳಿಗಳನ್ನು ಕಾಲೇಜಿನವರು ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸದ್ಯ ಜೈಲಿನಲ್ಲಿರುವ ವಿದ್ಯಾರ್ಥಿಯನ್ನು ಎಸ್ಎಫ್ಐ ಸಂಘಟನೆಯವರು ಭೇಟಿ ಮಾಡಿ ಮಾಹಿತಿ ಪಡೆದಿದ್ದಾರೆ. ನಾನು ಯಾವುದೇ ದೇಶವಿರೋಧಿ ಘೋಷಣೆ ಕೂಗಿಲ್ಲ. ನನ್ನದು ಸೈನಿಕ ಕುಟುಂಬ. ಈ ವಿಷಯ ನನ್ನ ತಂದೆ-ತಾಯಿಗೆ ತಿಳಿದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿ ತಿಳಿಸಿದ್ದಾನೆ ಎಂಬ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin