ಎಮಿರೇಟ್ಸ್ ವಿಮಾನದಲ್ಲಿ ಬೆಂಕಿ : ಪ್ರಯಾಣಿಕರ ರಕ್ಷಣೆ ವೇಳೆ ಅಗ್ನಿ ಶಾಮಕ ಸಿಬ್ಬಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

asdgfAGDGDGದುಬೈ ಆ.04: ಕೇರಳದ ತಿರುವನಂತಪುರದಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಸಂಸ್ಥೆಗೆ ಸೇರಿದ ವಿಮಾನವು ದುಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್ ವೇಳೆ ಬೆಂಕಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲ 226 ಪ್ರಯಾಣಿಕರು ಪವಾಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ದುರಾದೃಷ್ಟವಶಾತ್ ಪ್ರಯಾಣಿಕರ ಸುರಕ್ಷತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ್ದಾನೆ.
ಎಮಿರೇಟ್ಸ್ ವಿಮಾನ ಸಂಸ್ಥೆಯ ಬೋಯಿಂಗ್ 777 ವಿಮಾನ ದುಬೈ ಅಂತಾರಾಷ್ಟ್ರೀ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಲ್ಯಾಂಡಿಂಗ್ ಗೇರ್ ದೋಷದಿಂದಾಗಿ ವಿಮಾನದ ಬಲಭಾಗ ರನ್ವೇಗೆ ಉಜ್ಜಿದೆ. ಹೀಗಾಗಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನದೊಳಗೆ ದಟ್ಟ ಹೊಗೆ ಆವರಿಸಿದೆ.


ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಕೆಲಕಾಲ ಆತಂಕಗೊಂಡರಾದರೂ, ವಿಮಾನದ ಸಿಬ್ಬಂದಿಗಳು ಕೂಡಲೇ ತುರ್ತು ನಿರ್ಗಮನದ ಬಾಗಿಲುಗಳನ್ನು ತೆರೆದ ಹಿನ್ನಲೆಯಲ್ಲಿ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಇಳಿದಿದ್ದಾರೆ.
ಇನ್ನು ಬೆಂಕಿ ಹೊತ್ತಿದ್ದ ವಿಮಾನದಿಂದ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದ ಅಗ್ನಿಶಾಮಕ ಸಿಬ್ಬಂದಿಯೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಎಮಿರೇಟ್ಸ್ ವಿಮಾನ ಸಂಸ್ಥೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದೆ.

► Follow us on –  Facebook / Twitter  / Google+

ಡೌನ್ಲೋಡ್ ‘ಈ ಸಂಜೆ’ ಮೊಬೈಲ್  ಆಪ್ 

Facebook Comments

Sri Raghav

Admin