ಎರಡನೇ ದಿನಕ್ಕೆ ಲಾರಿ ಮುಷ್ಕರ : ಸುಮಾರು 2000 ಕೋಟಿ ರೂ. ವಹಿವಾಟು ನಷ್ಟ

ಈ ಸುದ್ದಿಯನ್ನು ಶೇರ್ ಮಾಡಿ

Lorry---01

ಬೆಂಗಳೂರು, ಅ.10- ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಲಾರಿ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದ್ದು, ಸರಕು-ಸಾಗಾಣಿಕೆಯಲ್ಲಿ ವ್ಯತ್ಯಯ ಹೆಚ್ಚಾಗಿದೆ. ದೇಶಾದ್ಯಂತ ನಿನ್ನೆಯಿಂದ ಲಾರಿ ಮುಷ್ಕರ ಆರಂಭವಾಗಿದ್ದು, ಸುಮಾರು ಎರಡು ಸಾವಿರ ಕೋಟಿ ವಹಿವಾಟು ನಷ್ಟವಾಗಿದೆ. ರಾಜ್ಯವೊಂದರಲ್ಲಿ 150 ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ವಸ್ತುಗಳ ಸಾಗಾಣಿಕೆ ನಿಲ್ಲಿಸಲಾಗಿದೆ. ಇದರಿಂದ ಭಾರೀ ವ್ಯತ್ಯಯ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ. ಶೇ.80ರಷ್ಟು ವಹಿವಾಟು ಬಂದ್ ಆಗಿದೆ ಎಂದು ದಕ್ಷಿಣ ಭಾರತ ಲಾರಿ ಮಾಲೀಕರ, ಚಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಅವೈಜ್ಞಾನಿಕ ಜಿಎಸ್‍ಟಿ ಜಾರಿ, ಡೀಸೆಲ್ ದರ ಏರಿಕೆ, ರಸ್ತೆ ಸಾರಿಗೆ ಇಲಾಖೆ ಅಧಿಕಾರಿಗಳ ಕಿರುಕುಳ ಇತ್ಯಾದಿ ವಿಷಯಗಳನ್ನು ಮುಂದಿಟ್ಟುಕೊಂಡು ಎರಡು ದಿನಗಳ ಕಾಲ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಅವರು ಹೇಳಿದರು. ಈ ಪ್ರತಿಭಟನೆ ದೇಶಾದ್ಯಂತ ನಡೆಯುತ್ತಿದೆ. ಕರ್ನಾಟಕದಲ್ಲೂ ಪ್ರತಿಭಟನೆಗೆ ಬೆಂಬಲ ಸೂಚಿಸಲಾಗಿದೆ ಎಂದು ಹೇಳಿದರು.  ಏಕರೂಪ ಟೋಲ್‍ಅನ್ನು ಜಾರಿಗೊಳಿ ಸಬೇಕು. ಡೀಸೆಲ್ ಮೇಲಿನ ವ್ಯಾಟ್ ಇಳಿಸಬೇಕು. ಈ ಬೇಡಿಕೆಗಳನ್ನು ಈಡೇರಿಸಿದರೆ ಲಾರಿ ಮಾಲೀಕರಿಗೆ, ನಿರ್ವಾಹಕರಿಗೆ ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin