ಎಸಿಬಿಯಿಂದ ಗೋವಾ ಅಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Goa-CM-AAP

ಪಣಜಿ. ಡಿ.27- ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಅಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಎಲ್ವಿಸ್ ಗೋಮ್ಸ್ ಅವರನ್ನು ಭೂ ಪರಿವರ್ತನೆ ಹಗರಣದ ತನಿಖೆಗೆ ಸಂಬಂಧಪಟ್ಟಂತೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತೀವ್ರ ವಿವಾರಣೆಗೆ ಒಳಪಡಿಸಿತು.  ಗೋಮ್ಸ್ ನಿನ್ನೆ ಎಸಿಬಿ ಕಚೇರಿಗೆ ಹಾಜರಾಗಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಣಜಿಯ ಅಲ್‍ಟಿನೋ ಪ್ರದೇಶದಲ್ಲಿರುವ ಈ ಕಚೇರಿ ಮುಂದೆ ಅನೇಕ ಎಎಪಿ ಕಾರ್ಯಕರ್ತರು ಜಮಾಯಿತಿ ಫಲಕಗಳು ಮತ್ತು ಭಿತ್ತಿಪತ್ರಗಳನ್ನು ಹಿಡಿದುಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಎಎಪಿ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ದಕ್ಷಿಣ ಗೋವಾದ ಕಂಕೋಲಿಂ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಗೋವಾ ವಿಧಾನಸಭಾ ಚುನಾವಣೆಗೆ ಗೋಮ್ಸ್ ಅವರನ್ನು ಅಮ್ ಆದ್ಮಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಿಸಲಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin