ಎಸಿಬಿ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳ ಮೇಲೂ ದಾಳಿ ನಡೆಸಬಹುದು

ಈ ಸುದ್ದಿಯನ್ನು ಶೇರ್ ಮಾಡಿ

IT-vs-ACB--01

ಬೆಂಗಳೂರು, ಅ.6- ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1989ರನ್ವಯ ಎಸಿಬಿ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳ ಮೇಲೂ ದಾಳಿ ನಡೆಸಬಹುದಾಗಿದೆ ಎಂದು ಎಸಿಬಿ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಐಟಿ ಅಧಿಕಾರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುವ ಅಧಿಕಾರವಿಲ್ಲ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಈ ಸಂಜೆಯೊಂದಿಗೆ ಎಸಿಬಿ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದರು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯನ್ವಯ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತ್ಟಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ಮೇಲೂ ಎಸಿಬಿ ಅಧಿಕಾರಿಗಳು ರೈಡ್, ಟ್ರ್ಯಾಪ್ ಮಾಡಬಹುದಾಗಿದೆ. ದೋಷಾರೋಪಣ ಪಟ್ಟಿ ಸಲ್ಲಿಸುವ ಸಂದರ್ಭದಲ್ಲಿ ಆಯಾ ಇಲಾಖೆಯ ಮುಖ್ಯಸ್ಥರ ಅನುಮತಿ ಪಡೆಯಬೇಕಾಗುತ್ತದೆ ಹೊರತು ದಾಳಿಯನ್ನೇ ನಡೆಸುವಂತಿಲ್ಲ ಎಂಬ ಕಾನೂನಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂಬ ಹಿನ್ನೆಲೆಯಲ್ಲಿ ತೆರಿಗೆ ಇಲಾಖೆಯ ಮಹಾನಿರ್ದೇಶಕರಾದ ಟಿ.ಆರ್.ಬಾಲಕೃಷ್ಣ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ವ್ಯಾಪ್ತಿಯ ಐಟಿ ಅಧಿಕಾರಿಗಳ ಮೇಲೆ ದಾಳಿ ಮಾಡುವ ಅಧಿಕಾರ ಎಸಿಬಿಗೆ ಇಲ್ಲ. ದೂರುಗಳೇನಿದ್ದರೂ ಸಿಬಿಐಗೆ ಅಥವಾ ಐಟಿ ಇಲಾಖೆಗೆ ನೀಡಬೇಕು ಎಂದು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಈ ವಿಷಯ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿ ರಾಜಕೀಯ ತಿರುವು ಪಡೆದಿತ್ತು. ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ತನ್ನ ವ್ಯಾಪ್ತಿ ಮೀರಿ ಕೆಲಸ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ಸಂಜೆಗೆ ಎಸಿಬಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಯಾವುದೇ ಅಧಿಕಾರಿಗಳ ಮೇಲೆ ದಾಳಿ ನಡೆಸುವ ಅಧಿಕಾರ ಎಸಿಬಿಗೆ ಇದೆ. ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಂದರ್ಭದಲ್ಲಿ ಇಲಾಖೆಯ ಅನುಮತಿ ಪಡೆಯುವ ನಿಯಮವಿದೆ. ದಾಳಿಯನ್ನೇ ನಡೆಸಬಾರದು ಎಂಬ ಕಾನೂನಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin