ಎಸಿಬಿ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ ಪೆಕ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

ACB
ಮೈಸೂರು, ಸೆ.20- ಖಾತೆ ವರ್ಗಾವಣೆ ಮಾಡಲು ಮಹಿಳೆಯೊಬ್ಬರಿಂದ ಲಂಚ ಪಡೆಯುತ್ತಿದ್ದ ರೆವಿನ್ಯೂ ಇನ್ಸ್‍ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 8ರ ರೆವಿನ್ಯೂ ಇನ್ಸ್‍ಪೆಕ್ಟರ್ ಪಿ.ಕುಮಾರಸ್ವಾಮಿ ಎಸಿಬಿ ಬಲೆಗೆ ಬಿದ್ದವರಾಗಿದ್ದಾರೆ.

ನಗರದ ಉದಯಗಿರಿ ವಾಸಿ ಲಕ್ಷ್ಮಿಬಾಯಿ ಎಂಬುವವರು ಮನೆ ಖಾತೆ ವರ್ಗಾವಣೆಗಾಗಿ ವಲಯ ಕಚೇರಿ 8ರಲ್ಲಿ ಅರ್ಜಿ ಸಲ್ಲಿಸಿದ್ದರು. ಕುಮಾರಸ್ವಾಮಿ ಖಾತೆ ವರ್ಗಾವಣೆ ಮಾಡಿಕೊಡಲು ಸತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮಿಬಾಯಿ ಅವರು ತಮ್ಮ ಪರಿಚಯಸ್ಥರಾದ ಪವಿತ್ರಕುಮಾರ್ ಬಳಿ ಸಹಾಯ ಕೇಳಿದ್ದರು.

ಪವಿತ್ರಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದಾಗ 2500ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪವಿತ್ರ ಅವರು ಎಸಿಬಿಗೆ ದೂರು ನೀಡಿದ್ದರು.   ನಿನ್ನೆ ಸಂಜೆ ಕುಮಾರಸ್ವಾಮಿ ಅವರು 2 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿಯ ಡಿವೈಎಸ್‍ಪಿ ಉಮೇಶ್ ಸೇಠ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಕುಮಾರಸ್ವಾಮಿ ಅವರನ್ನು ಬಂಧಿಸಿದ್ದಾರೆ.

Facebook Comments

Sri Raghav

Admin