ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ರದ್ದುಪಡಿಸುವ ಕುರಿತು ಸುಪ್ರೀಂ ಆದೇಶದ ಬಗ್ಗೆ ಚರ್ಚಿಸಿ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

DKShivakumar-01

ಬೆಂಗಳೂರು, ಫೆ.20-ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿಯನ್ನು ರದ್ದುಪಡಿಸಿರುವ ಸುಪ್ರೀಂಕೋರ್ಟ್‍ನ ಆದೇಶವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ವಹಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಭರವಸೆ ನೀಡಿದರು.  ಇಂಧನ ಇಲಾಖೆಯಲ್ಲಿ ಬಡ್ತಿ ಮೀಸಲಾತಿಯನ್ನು ರದ್ದು ಮಾಡಿರುವ ಸುಪ್ರೀಂಕೋರ್ಟ್ ಆದೇಶ ಜಾರಿಗೆ ಒತ್ತಾಯಿಸಿ ಸಾವಿರಕ್ಕೂ ಹೆಚ್ಚು ಎಂಜಿನಿಯರ್‍ಗಳು ಇಂದು ಸಚಿವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಮಾತನಾಡಿದ ಅವರು, ಯಾರಿಗೂ ಅನ್ಯಾಯ ಮಾಡುವ ಉದ್ದೇಶವಿಲ್ಲ. ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುತ್ತೇವೆ. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‍ನ ಆದೇಶ ಜಾರಿ ಕುರಿತಂತೆ ಕ್ರಮ ವಹಿಸಲಾಗುವುದು ಎಂದರು.

ಈಗಾಗಲೇ ಅಡ್ವೊಕೇಟ್ ಜನರಲ್ ಅವರಿಗೆ ಪತ್ರ ಬರೆಯಲಾಗಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿ 1978ರಿಂದ ಜಾರಿಯಲ್ಲಿರುವ ವಿಶೇಷ ಬಡ್ತಿ ಮೀಸಲಾತಿಯನ್ನು ರದ್ದುಗೊಳಿಸಲು ಫೆ.9 ರಂದು ಸುಪ್ರೀಂಕೋರ್ಟ್ ಆದೇಶಿಸಿರುವುದಲ್ಲದೆ ಮೂರು ತಿಂಗಳೊಳಗೆ ಈ ಆದೇಶ ಜಾರಿಗೊಳಿಸುವಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಇಂದು ಕೆಪಿಟಿಸಿಎಲ್ ಹಾಗೂ ಎಸ್ಕಾಂನ ಅಧಿಕಾರಿ ಸಿಬ್ಬಂದಿ ಇಂಧನ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರು.  ಬಡ್ತಿ ಮೀಸಲಾತಿಯಿಂದಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ವರ್ಗಕ್ಕೆ ಅನ್ಯಾಯವಾಗುತ್ತಿದೆ. ಬೆಸ್ಕಾಂನ ಚೀಫ್ ಎಂಜಿನಿಯರ್‍ಗಳಲ್ಲಿ ನೂರಕ್ಕೆ ನೂರರಷ್ಟು, ಸೂಪರಿಂಡೆಂಟ್‍ಗಳಲ್ಲಿ ಶೇ.80ಷ್ಟು ಎಇಇಗಳಲ್ಲಿ ಶೇ.32ರಷ್ಟು ಮಂದಿಗೆ ಬಡ್ತಿ ದೊರೆಯುತ್ತಿದ್ದು, ಇದರಿಂದ ಇತರೆ ವರ್ಗಗಳಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಕೂಡಲೇ ಈ ಆದೇಶ ಜಾರಿಗೊಳಿಸಬೇಕು ಎಂದರು.

ಇಂಧನ ಇಲಾಖೆ, ಜಲಸಂಪನ್ಮೂಲ ಇಲಾಖೆ ಮಾತ್ರ ಹೋರಾಟ ನಡೆಸಿದೆ. ಆದರೆ ಎಲ್ಲಾ ಇಲಾಖೆಗಳಲ್ಲಿ ಇರುವ ಅದೆಷ್ಟೋ ಮಂದಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin