ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Heart-Attack

ಹಾವೇರಿ, ಮಾ. 23: ಹಾವೇರಿ ಜಿಲ್ಲೆಯ ಗುತ್ತಲದ ಆರ್‌.ಆರ್.ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಕಾರ್ಯದಲ್ಲಿ ನಿರತರಾಗಿದ್ದ ಎಸ್.ಆರ್.ಕೊರವರ (57) ಎಂಬುವರು ತೀವ್ರ ಹೃದಯಾಘಾತದಿಂದ ಪರೀಕ್ಷಾ ಕೊಠಡಿಯಲ್ಲೇ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ವೇಳೆ ಜಾಗೃತ ದಳದ ಸದಸ್ಯರಾಗಿ ಪರೀಕ್ಷಾ ಕೇಂದ್ರದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ಎಸ್.ಆರ್.ಕೊರವರ ಕೊಠಡಿಯಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ. ತಕಃಸ್ನ ಅವರನ್ನು ವಿದ್ಯಾರ್ಥಿಗಳು ಅಲ್ಲೇ ಇದ್ದ ಇತರ ಸಿಬ್ಬಂದಿ ಮತ್ತು ಭದ್ರತೆಗೆ ಬಂದಿದ್ದ ಪೊಲೀಸ್ ಸಿಬ್ಬಂದಿ ವಿಷಯ ತಿಳಿಸಿದ್ದಾರೆ . ಕೂಡಲೇ ಕೊರವರ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ,  ಆದರೆ ಅಷ್ಟರಲ್ಲಾಗಲೇ ಕೊರವರ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಹಾವೇರಿಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು.  ಅವಘಡ ಸಂಭವಿಸಿದರೂ ಕೂಡ ಗುತ್ತಲದ ಆರ್.ಆರ್.ಇಂಗ್ಲೀಷ್ ಮೀಡಿಯಂ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಸ್ಥಗಿತಗೊಳಿಸದೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಪರೀಕ್ಷೆಯನ್ನು ಮುಂದುವರೆಸಿದ್ದಾರೆ.

Facebook Comments

Sri Raghav

Admin