ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-CM

ಬೆಂಗಳೂರು, ಮಾ.7- ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಅದಕ್ಕೆಲ್ಲಾ ನಾನು ಪ್ರತಿಕ್ರಿಯಿಸುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ವಿಧಾನಸೌಧದಲ್ಲಿ ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ ಎಸ್.ಎಂ.ಕೃಷ್ಣ ಅವರ ರಾಜಕೀಯ ನಡೆಯ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.  ನಿನ್ನೆ ರಾತ್ರಿ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಕೃಷ್ಣಾ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಸೇರುವಂತೆ ಕೃಷ್ಣಾ ಅವರಿಗೆ ಆಹ್ವಾನ ನೀಡಲಾಗಿದೆ.

ಕಳೆದ ತಿಂಗಳು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿರುವ ಕೃಷ್ಣಾ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ವ್ಯಾಪಕವಾಗಿದ್ದವು. ಆದರೆ, ಈವರೆಗೂ ಅಕೃತವಾಗಿ ಕೃಷ್ಣ ತಮ್ಮ ನಿರ್ಧಾರವನ್ನು ಪ್ರಕಟಿಸಿಲ್ಲ.   ನಿನ್ನೆ ಯಡಿಯೂರಪ್ಪ ಮತ್ತು ಅಶೋಕ್ ಅವರ ಭೇಟಿ ವೇಳೆಯೂ ಬಿಜೆಪಿ ಸೇರುತ್ತೇನೆ ಎಂದು ನೇರವಾಗಿ ಹೇಳಿಲ್ಲ. ಆದರೆ, ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ ಅವರು, ಕೃಷ್ಣ ಅವರು ಬಿಜೆಪಿ ಸೇರುವ ಆಸಕ್ತಿ ತೋರಿದ್ದಾರೆ ಎಂದು ಹೇಳಿದ್ದರು.  ಕೃಷ್ಣ ಅವರನ್ನು ಕಾಂಗ್ರೆಸ್‍ನಲ್ಲಿ ಉಳಿಸಿಕೊಳ್ಳಬೇಕು ಎಂಬ ಒತ್ತಡ ಪಕ್ಷದಲ್ಲಿ ತೀವ್ರವಾಗಿದೆ. ಹೈಕಮಾಂಡ್ ನಾಯಕರು ಕೃಷ್ಣ ಅವರನ್ನು ಸಂಪರ್ಕಿಸಲು ಆರಂಭದಲ್ಲಿ ನಿರಂತರವಾಗಿ ಪ್ರಯತ್ನ ಮಾಡಿದರು. ಆದರೆ, ಅದು ಈಡೇರಿಲ್ಲ.  ಈಗ ಬಿಜೆಪಿ ಕೃಷ್ಣ ಅವರನ್ನು ಸೆಳೆಯಲು ಯತ್ನಿಸುತ್ತಿದ್ದು, ಕಾಂಗ್ರೆಸ್‍ನ ನಿಷ್ಠಾವಂತರಲ್ಲಿ ತಳಮಳ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣ ಅವರ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಪ್ರತಿಕ್ರಿಯಿಸುವುದಿಲ್ಲ ಎಂದು ನುಣುಚಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin