ಎಸ್.ಎಂ.ಕೃಷ್ಣ ಸಹೋದರಿ ನಿಧನ, ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

SMKRishna--01

ಬೆಂಗಳೂರು,ಮಾ.15-ತಮ್ಮ ಸಹೋದರಿ ಹಠಾತ್ ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಬಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಲಾಗಿದೆ.   ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಇಂದು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ಎಸ್.ಎಂ.ಕೃಷ್ಣ ಸೇರ್ಪಡೆಯಾಗಲು ವೇದಿಕೆ ಸಜ್ಜಾಗಿತ್ತು.  ಸಂಜೆ 5 ಗಂಟೆಗೆ ಎಸ್.ಎಂ.ಕೃಷ್ಣ ಅವರು ಪಕ್ಷ ಸೇರ್ಪಡೆ ಸಮಯವನ್ನು ನಿಗದಿಪಡಿಸಿದ್ದರು. ಇದಕ್ಕಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ ನವದೆಹಲಿಗೆ ತೆರಳಿದ್ದರು.

ಆದರೆ ಕಳೆದ ರಾತ್ರಿ ಕೃಷ್ಣ ಅವರ ಸಹೋದರಿ ಸುನಿತಾ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಕೊನೆಯುಸಿರೆಳೆದರು. ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಾಗಿರುವುದರಿಂದ ಬೆಳಗ್ಗೆ ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು.   ಸುನಿತಾ ಅವರ ಪಾರ್ಥೀವ ಶರೀರವನ್ನು ಸದಾಶಿವನಗರದ ಡಾಲರ್ಸ್ ಕಾಲೋನಿಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗಿತ್ತು. ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯ ದಿನಾಂಕವನ್ನು ಕೇಂದ್ರ ವರಿಷ್ಠರು ಸದ್ಯದಲ್ಲೇ ನಿಗದಿಪಡಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin