ಎ.ಜೆ.ಸದಾಶಿವ ಆಯೋಗ ವರದಿ ಜಾರಿಗೆ ದಸಂಸ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

sadashiva-tumkuru

ತುಮಕೂರು, ಆ.17- ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನೇಮಕಗೊಂಡಿದ್ದ ನ್ಯಾ.ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿಯ ಶಿಫಾರಸುಗಳನ್ನು ಕೂಡಲೇ ಜಾರಿಗೆ ತರಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಭೇಟಿಯಾಗಿ ಮನವಿ ಸಲ್ಲಿಸಿದರು.
ಮನವಿಯಲ್ಲಿ ರಾಜ್ಯದಲ್ಲಿ ಅಸ್ಪುಶ್ಯತೆ ನಿರ್ಮೂಲನೆಗಾಗಿ ಸರ್ಕಾರವು ದಲಿತ ಜನಾಂಗದವರ ಮೇಲೆ ನಡೆಯುವ ದೌರ್ಜನ್ಯ, ದಬ್ಬಾಳಿಕೆ, ಶೋಷಣೆಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ದೇವಸ್ಥಾನಗಳಿಗೆ ದಲಿತರಿಗೆ ಮುಕ್ತ ಪ್ರವೇಶ ಎಂಬ ನಾಮಫಲಕ ಸರಕಾರದಿಂದಲೇ ಹಾಕಿಸಬೇಕು.ಗೋ ಸಂರಕ್ಷಣೆ ಹೆಸರಲ್ಲಿ ದಲಿತ ಅಲ್ಪಸಂಖ್ಯಾತರ ಮೇಲೆ ಹಲ್ಲೆ ದೌರ್ಜನ್ಯ ನಡೆಸುತ್ತಿರುವ ಬಜರಂಗದಳ,ಗೋ ಸಂರಕ್ಷಣೆ ಸಂಘ, ಹಿಂದೂ ಮಹಾಸಭಾ ಕಾರ್ಯಕರ್ತರನ್ನು ಬಂಧಿಸಿ ಗಡಿಪಾರು ಮಾಡುವಂತಹ ಶಾಸನದ ಮೂಲಕ ಕಠಿಣ ಕಾನೂನು ಜಾರಿ ಮಾಡಬೇಕು. ಸ್ವಚ್ಚಭಾರತ್ ಮಿಷನ್ ಮತ್ತು ಯೋಗ ದಿನಾಚರಣೆ ಆಚರಿಸುವಂತೆ ಪ್ರತಿ ಗ್ರಾಮ ಪಂಚಾಯಿತಿ,ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಅಸ್ಪೃಶ್ಯತಾ ನಿವಾರಣೆ ದಿನಾಚರಣೆ ಆಚರಣೆ ಚಾಲನೆ ನೀಡಬೇಕು.ಈ ಸಂದರ್ಭದಲ್ಲಿ ಡಿಎಸ್‍ಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಎನ್.ಮಧು, ತುಮಕೂರು ವಿಭಾಗೀಯ ಅಧ್ಯಕ್ಷ ಪಿ.ವಿ.ನೃಪತುಂಗ, ವಿದ್ಯಾರ್ಥಿ ಒಕ್ಕೂಟದ ತಾಲೂಕು ಅಧ್ಯಕ್ಷ ಜಿ.ಆರ್.ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin