ಎ.ಮಂಜು ವಿರುದ್ಧ ಮತ್ತೊಂದು ಆರೋಪ ಮಾಡಿದ ರೋಹಿಣಿ ಸಿಂಧೂರಿ

ಈ ಸುದ್ದಿಯನ್ನು ಶೇರ್ ಮಾಡಿ

manju-rohini-1
ಹಾಸನ, ಏ.11-ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಮರ ಮುಂದುವರೆದಿದ್ದು, ಚುನಾವಣಾಧಿಕಾರಿಯ ಆತ್ಮಸ್ಥೈರ್ಯ ಕುಗ್ಗಿಸಲು ಸಚಿವರು ಯತ್ನಿಸುತ್ತಿದ್ದಾರೆ ಎಂದು ಡಿ.ಸಿ.ಗಂಭೀರ ಆರೋಪ ಮಾಡಿದ್ದಾರೆ. ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎ.ಮಂಜು ಚುನಾವಣಾ ನೀತಿ ಸಂಹಿತೆಯನ್ನು ತಾವು ಉಲ್ಲಂಘಿಸಿಲ್ಲ. ಆದರೂ ನನ್ನ ವಿರುದ್ಧ ಸುಳ್ಳು ಎಫ್‍ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಬೆನ್ನಲ್ಲೇ ಚುನಾವಣಾಧಿಕಾರಿಯ ಆತ್ಮಸ್ಥೈರ್ಯ ಕುಗ್ಗಿಸಲು ಸಚಿವರು ಯತ್ನಿಸುತ್ತಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ರೋಹಿಣಿ ಆರೋಪಿಸಿದ್ದಾರೆ.

ಮೂರು ಪುಟಗಳಷ್ಟು ಪತ್ರ ಬರೆದಿರುವ ರೋಹಿಣಿ ಅವರು, ಸಚಿವರು ಮಾದರಿ ನೀತಿ ಸಂಹಿತೆ ಹಾಗೂ ಕಾನೂನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಸಚಿವರು ಬಗರ್‍ಹುಕುಂ ಯೋಜನೆಯಡಿ ಸಾಗುವಳಿ ಪತ್ರ ನೀಡಿದ್ದಾರೆ ಎಂದು ಆರೋಪಿಸಿದ್ದಲ್ಲದೆ, ತಹಶೀಲ್ದಾರ್ ಅಮಾನತಿಗೂ ಶಿಫಾರಸ್ಸು ಮಾಡಿದ್ದರು.  ಈ ಹಿನ್ನೆಲೆಯಲ್ಲಿ ಸಚಿವ ಎ.ಮಂಜು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ. ನನ್ನ ವಿರುದ್ಧ ಸುಳ್ಳು ಎಫ್‍ಐಆರ್ ದಾಖಲಿಸಿದ್ದಾರೆ. ಎಫ್‍ಐಆರ್ ವಾಪಸ್ ಪಡೆಯಲು ನಿರ್ದೇಶನ ನೀಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದರು. ಒಟ್ಟಾರೆ ಇಬ್ಬರ ನಡುವೆ ಸಮರ ಮತ್ತೆ ಮುಂದುವರೆದಿದೆ.

Facebook Comments

Sri Raghav

Admin