ಏಪ್ರಿಲ್ ತಿಂಗಳ ಅಂತ್ಯ ಅಥವಾ ಮೇ ಮೊದಲ ವಾರದಲ್ಲಿ ಚುನಾವಣೆ ಆಯೋಗ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

Karnataka-Election--2018

ಬೆಂಗಳೂರು , ಜ.6-ಏಪ್ರಿಲ್ ತಿಂಗಳ ಅಂತ್ಯ, ಮೇ ಮೊದಲ ವಾರದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಆಯೋಗ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.  2018ರ ವಿಧಾನಸಭೆ ಚುನಾವಣೆ ಕಾವು ಈಗಾಗಲೇ ರಂಗೇರಿದೆ. ಒಂದೆಡೆ ರಾಜಕೀಯ ಪಕ್ಷಗಳು ಯಾತ್ರೆ, ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಇತ್ತ ಚುನಾವಣಾ ಆಯೋಗ ಚುನಾವಣೆಗೆ ಸಿದ್ಧತೆ, ಭದ್ರತೆ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ, ಸಭೆಗಳನ್ನು ನಡೆಸುತ್ತಿದೆ.
ಚುನಾವಣೆಗೆ ಅಗತ್ಯವಾದ ತಯಾರಿಗಳನ್ನು ಕೂಡ ಮಾಡಿಕೊಳ್ಳುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಜ.12ರವರೆಗೆ ಅವಕಾಶವನ್ನು ನೀಡಿದೆ. ಅಲ್ಲಿಯವರೆಗ ಅರ್ಜಿ ಸಲ್ಲಿಸುವವರಿಗೆ ಗುರುತಿನ ಚೀಟಿ ಪಡೆಯಲು ಅವಕಾಶವಿದೆ. ಚುನಾವಣೆಗೆ ಅಗತ್ಯವಾದ ಸಿಬ್ಬಂದಿಗೆ ತರಬೇತಿ ನೀಡುವ ಸಂಬಂಧ ಆಯೋಗ ತಯಾರಿ ನಡೆಸಿದೆ.

ಈಗಾಗಲೇ ಮೈಸೂರಿನಲ್ಲಿ ಹಿರಿಯ ಅಧಿಕಾರಿಗಳಿಗೆ ತರಬೇತಿ ನೀಡುತ್ತಿದೆ. ಸಿಬ್ಬಂದಿಗೆ ಮತಯಂತ್ರಗಳ ಬಳಕೆ ಬಗ್ಗೆ ತರಬೇತಿ ನೀಡುವ ಸಂಬಂಧ ಸಿದ್ದತೆ ಮಾಡಿಕೊಂಡಿದೆ. ವಿವಿ ಪ್ಯಾಟ್ ಅಳವಡಿಸುವ ಸಂಬಂಧವು ತಯಾರಿ ನಡೆಯುತ್ತಿದೆ. ನಕಲಿ ಮತದಾನ ತಡೆಯಲು ಅಗತ್ಯ ಎಲ್ಲಾ ಕ್ರಮಕೈಗೊಳ್ಳುವ ಸಂಬಂಧ ಚುನಾವಣಾ ಆಯೋಗ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ.  ಎಲೆಕ್ಟ್ರಾನಿಕ್ ಮತ ಯಂತ್ರಗಳ ಮತದಾನ ಬಗ್ಗೆ ಸಾಕಷ್ಟು ಅನುಮಾನಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಚುನಾವಣಾ ಆಯೋಗ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಿದೆ.

ಅಗತ್ಯ ಸಿಬ್ಬಂದಿಗಳು, ಮತದಾನ ಕೇಂದ್ರಗಳನ್ನು ಆಯೋಗ ಈಗಾಗಲೇ ಪರಿಶೀಲನೆ ನಡೆಸಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಸಂಬಂಧ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿರುವ ಆಯೋಗ ಹಲವು ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದೆ. ಬಜೆಟ್ ನಂತರ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆಯಾಗಲಿದೆ. ಒಂದು ಹಂತದಲ್ಲಿ ಅಥವಾ ಎರಡು ಹಂತದಲ್ಲಿ ಚುನಾವಣೆ ನಡೆಸಬೇಕೇ ಎಂಬ ಬಗ್ಗೆ ಚುನಾವಣಾಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin