ಏ.1ರಿಂದ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಮಾತೃಪೂರ್ಣ ಯೋಜನೆ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

MatruPoorna-01

ಬೆಂಗಳೂರು,ಮಾ.13-ಮಹಿಳೆಯರು ಮತ್ತು ಗರ್ಭಿಣಿಯರಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಮಾತೃಪೂರ್ಣ ಯೋಜನೆಯನ್ನು ಜಾರಿ ಮಾಡಲಾಗಿದೆ.   ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ 2017-18ನೇ ಸಾಲಿನ ಬಜೆಟ್‍ನಲ್ಲಿ ಈ ಯೋಜನೆಯನ್ನು ಘೋಷಿಸಲಿದ್ದು , ಏ.1ರಿಂದ ರಾಜ್ಯದಲ್ಲಿ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ.   ಮೊದಲ ಹಂತದಲ್ಲಿ ಮೈಸೂರಿನ ಹೆಗ್ಗಡದೇವನಕೋಟೆ, ತುಮಕೂರಿನ ಮಧುಗಿರಿ, ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಇದು ಅನುಷ್ಠಾನಗೊಳಲ್ಲಿದ್ದು ನಂತರ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ.

ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೌಷ್ಠಿಕ ಆಹಾರವನ್ನು ನೀಡುವುದರ ಮೂಲಕ ರಕ್ತಹೀನತೆಯನ್ನು ತಡಗಟ್ಟುವುದೇ ಈ ಯೋಜನೆಯ ಮೂಲ ಉದ್ದೇಶ.  ಗರ್ಭಿಣಿ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕಾಂಶವುಳ್ಳ ತರಕಾರಿ, ಬೇಳೆ ಹಾಗೂ ಬಿಸಿಯೂಟವನ್ನು ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದರ ಉಸ್ತುವಾರಿ ನೋಡಿಕೊಳ್ಳುತ್ತದೆ.  ಪೌಷ್ಠಿಕಾಂಶ ಆಹಾರ ಸೇವಿಸಲು  ಇಚ್ಛಿಸುವವರು ಪ್ರತಿ ಊಟಕ್ಕೆ 10 ರೂ. ನೀಡಬೇಕು. ಇದನ್ನು ಆಯಾ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರೇ ನೋಡಿಕೊಳ್ಳಬೇಕು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಉಸ್ತುವಾರಿಯಾಗಿರುತ್ತಾರೆ.

+ ಕಾರಣವೇನು?

ರಾಜ್ಯದಲ್ಲಿ ಇತ್ತೀಚೆಗೆ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚಾಗುತ್ತಿದ್ದು , ಈ ಬಗ್ಗೆ ಸರ್ಕಾರ ಗಮನಹರಿಸಬೇಕೆಂದು ವರದಿಯೊಂದನ್ನು ನೀಡಲಾಗಿತ್ತು. ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ಮಹಿಳೆಯರು ಅಪೌಷ್ಠಿಕತೆ ಹೆಚ್ಚುತ್ತಿರುವುದರಿಂದ ಮಕ್ಕಳ ಶಾರೀರಿಕ, ಮಾನಸಿಕ ಬೆಳವಣಿಗೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.   ಇದನ್ನು ಗಂಭೀರವಾಗಿ ತೆಗೆದುಕೊಂಡ ರಾಜ್ಯ ಸರ್ಕಾರ ಗರ್ಭಿಣಿ ಮಹಿಳೆಯರಿಗೆ ಮಾತೃಪೂರ್ಣ ಯೋಜನೆಯನ್ನು ಆರಂಭಿಸುತ್ತಿದ್ದು , ಬಜೆಟ್‍ನಲ್ಲಿ ಇದಕ್ಕಾಗಿ ಪ್ರತ್ಯೇಕ ಅನುದಾನವನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೀಮಿಸಲಿಡಲಿದ್ದಾರೆ. ಈ ಯೋಜನೆಗೆ ಹೆಚ್ಚಿನ ಹಣ ನೀಡಬೇಕೆಂದು ಸಚಿವೆ ಉಮಾಶ್ರೀ ಕೂಡ ಮನವಿ ಮಾಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin