ಏ.15, 16 ರಂದು ದೆಹಲಿಯಲ್ಲಿ ಕೆಂಪೇಗೌಡ ರಾಷ್ಟ್ರೀಯ ಉತ್ಸವ, ರಾಷ್ಟ್ರಪತಿ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

pranabh

ಬೆಂಗಳೂರು, ಮಾ.25– ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ಏ.15 ಮತ್ತು 16 ರಂದು ನವದೆಹಲಿಯ ತಾಲ್‍ಕಟೋರ ಕ್ರೀಡಾಂಗಣದಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಉತ್ಸವ ಆಯೋಜಿಸಿದೆ. ಉತ್ಸವದ ಉದ್ಘಾಟನೆಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರತಿಷ್ಠಾನದ ನಿಯೋಗವು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸಿದ್ದು, ಮುಖರ್ಜಿ ಅವರು ತುಂಬು ಮನಸ್ಸಿನಿಂದ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ.
ಕರ್ನಾಟಕದಿಂದ ದೆಹಲಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ನೆಲೆ ಕಲ್ಪಿಸಿ ಮಾರ್ಗದರ್ಶನ ನೀಡಲೆಂದೇ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ಸ್ಥಾಪಿತವಾಗಿದೆ.

ಅಂದಿನ ಉತ್ಸವಕ್ಕೆ ರಾಜ್ಯ ಮತ್ತು ರಾಷ್ಟ್ರದ ವಿವಿಧೆಡೆಗಳಿಂದ ಹಲವಾರು ಗಣ್ಯರು, ವಿದ್ವಾಂಸರು ಆಗಮಿಸುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ರಾಜ್ಯದ ಸಂಸದರು, ಶಾಸಕರು, ಬಿಬಿಎಂಪಿ ಮೇಯರ್, ಪಾಲಿಕೆ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಹಾಗೂ ನಿರ್ದೇಶಕರಾದ ಕನ್ನಡವೇ ಸತ್ಯ ರಂಗಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin