ಮುದ್ರಾ ಯೋಜನೆ ಪ್ರೋತ್ಸಾಹ ಅಭಿಯಾನಕ್ಕೆ ಅನಂತಕುಮಾರ್ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar--02

ಬೆಂಗಳೂರು, ಅ.7-ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮುದ್ರಾ ಯೋಜನೆ ಪ್ರೋತ್ಸಾಹ ಅಭಿಯಾನದ ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡುವ ಕಾರ್ಯಕ್ರಮಕ್ಕೆ ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಇಂದು ಚಾಲನೆ ನೀಡಿದರು.  ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೇಂದ್ರ ಹಣಕಾಸು ಸೇವೆಗಳ ಇಲಾಖೆ, ರಾಜ್ಯ ಸರ್ಕಾರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕುಗಳ ಸಮಿತಿ ಹಮ್ಮಿಕೊಂಡಿದ್ದ ಮುದ್ರಾ ಪ್ರೋತ್ಸಾಹ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದ್ದು, ಸೆ.27ರಂದು ಆರಂಭವಾಗಿರುವ ಈ ಅಭಿಯಾನ ಅ.17ರವರೆಗೂ ನಡೆಯಲಿದೆ ಎಂದರು.

 

ಈ ಮೂಲಕ ಕೇಂದ್ರ ಸರ್ಕಾರ ದೇಶದ ಕೃಷಿ ಕ್ಷೇತ್ರದ ಅಭಿವೃದ್ಧಿ ಮತ್ತು ಸ್ವಉದ್ಯೋಗ ಹೆಚ್ಚಳಕ್ಕೆ ಗಮನ ನೀಡಿದೆ ಎಂದರು.  ದೇಶದ ಯಾವ ಸಮುದಾಯದಲ್ಲಿ ಉದ್ಯಮಶೀಲತೆ ಉತ್ತೇಜಿಸಲು ಮತ್ತು ಈಗಾಗಲೇ ಅನೇಕ ಸಣ್ಣ ಉದ್ಯಮಗಳನನು ನಡೆಸುತ್ತಿರುವ ಉದ್ಯಮಶೀಲರಿಗೆ ಹಣಕಾಸಿನ ನೆರವು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಮುದ್ರಾ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನಸಾಮಾನ್ಯರ ಅಭಿವೃದ್ಧಿಗಾಗಿ ಜಾರಿಗೆ ತಂದಿದ್ದಾರೆ. ಜನ್‍ಧನ್ ಯೋಜನೆಯಡಿ ಕೋಟ್ಯಂತರ ಜನ ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

ಮುದ್ರಾ ಯೋಜನೆಯಡಿ ದೇಶದಾದ್ಯಂತ 10 ಲಕ್ಷ ರೂ.ಗಳವರೆಗೆ ಹಣಕಾಸು ನೆರವು ಒದಗಿಸಲಿದೆ ಜೊತೆಗೆ ಸಣ್ಣ ಹಣಕಾಸು ಸಂಸ್ಥೆಗಳಿಗೆ ಮರು ಹಣಕಾಸು ಸೌಲಭ್ಯ ಒದಗಿಸಲಾಗುವುದು ಎಂದರು. ಪಿಯು, ಎಸ್‍ಎಸ್‍ಸಿ ಯೋಜನೆಯಡಿ 14,604 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್, ರಾಜ್ಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್, ವನಿತಾ ಮಿಶ್ರ, ಶಾಸಕ ಅಶ್ವಥ್ ನಾರಾಯಣ್ ಮತ್ತಿತರರು ಇದ್ದರು.

Facebook Comments

Sri Raghav

Admin