ಐತಿಹಾಸಿಕ ಕುರುಡುಮಲೆ ದೇಗುಲಕ್ಕೆ ರಾಹುಲ್ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--02

ಕೋಲಾರ, ಏ.7- ಜನಾಶೀರ್ವಾದ ಯಾತ್ರೆಯ ಅಂತಿಮ ಹಂತದ ಪ್ರಚಾರಕ್ಕಾಗಿ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಳಬಾಗಿಲು ತಾಲ್ಲೂಕಿನ ಐತಿಹಾಸಿಕ ಕುರುಡುಮಲೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ವಾಗತಿಸಿದರು. ನಂತರ ವಿಶೇಷ ಹೆಲಿಕಾಪ್ಟರ್ ಮೂಲಕ ಮುಳಬಾಗಿಲಿಗೆ ತೆರಳಿದರು.

 

WhatsApp Image 2018-04-07 at 1.24.45 PM

ರಾಹುಲ್ ಆಗಮನದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ವಿಶೇಷ ಶೃಂಗಾರ ಮಾಡಲಾಗಿತ್ತು. ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಸುಮಾರು ಒಂದು ಗಂಟೆಗಳ ಕಾಲ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ರಾಹುಲ್‍ಗಾಂಧಿ ಅವರಿಗೆ ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಿದರು. ನಂತರ ಪ್ರಚಾರದ ಬಸ್‍ನಲ್ಲಿ ಮುಳಬಾಗಿಲು ಪಟ್ಟಣದಲ್ಲಿ ರೋಡ್‍ಶೋ ಮಾಡಿದರು.  ಈ ವೇಳೆ ಕಾರ್ಯಕರ್ತರು, ಅಭಿಮಾನಿಗಳು ಬಹಳಷ್ಟು ಸಂಖ್ಯೆಯಲ್ಲಿ ಪಾಲ್ಗೊಂಡರು.

WhatsApp Image 2018-04-07 at 1.24.48 PM

ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ, ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್‍ರೆಡ್ಡಿ ಸೇರಿದಂತೆ ಹಲವಾರು ಮುಖಂಡರು ರೋಡ್‍ಶೋನಲ್ಲಿ ಭಾಗವಹಿಸಿದ್ದರು.

WhatsApp Image 2018-04-07 at 1.25.11 PM

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin