ಐದನೇ ವರ್ಷಕ್ಕೆ ಸರ್ಕಾರ : 13ಕ್ಕೆ ಚಿತ್ರದುರ್ಗದಲ್ಲಿ ಒಂಭತ್ತು ಜಿಲ್ಲೆಗಳ ಫಲಾನುಭವಿಗಳ ಸಮಾವೇಶ

ಈ ಸುದ್ದಿಯನ್ನು ಶೇರ್ ಮಾಡಿ

H-Anjaneya

ಬೆಂಗಳೂರು, ಮೇ 11- ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೇ 13ಕ್ಕೆ ನಾಲ್ಕು ವರ್ಷಗಳನ್ನು ಪೂರೈಸಿ ಐದನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಬೆಂಗಳೂರು ವಿಭಾಗ ಮಟ್ಟದ ಒಂಭತ್ತು ಜಿಲ್ಲೆಗಳ ಫಲಾನುಭವಿಗಳ ಸಮಾವೇಶವನ್ನು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಿರುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯಾದ್ಯಂತ ಬರಗಾಲ ಆವರಿಸಿರಿವುದುರಿಂದ ವಿಜೃಂಭಣೆಯಿಂದ ವರ್ಷಾಚರಣೆ ಮಾಡಲಾಗುತ್ತಿಲ್ಲ. ಬೆಂಗಳೂರು ಕಂದಾಯ ವಿಭಾಗದ ಸರ್ಕಾರಿ ಸವಲತ್ತುಗಳನ್ನು ವಿತರಿಸಿ ಜನರಿಗೆ ಮನನ ಜನರಿಗೆ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಬೆಂಗಳೂರು ವಿಭಾಗದ ಉಸ್ತುವಾರಿ ಸಚಿವರು ಹಾಗೂ ಸಂಪುಟ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಹಾಗೂ ಮಾಹಿತಿ ಉತ್ಸವವನ್ನು ಮೂರು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ತಿಳಿಸಿದರು.



ಒಂಭತ್ತು ಜಿಲ್ಲೆಗಳ ಸುಮಾರು 50ಸಾವಿರ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಮಾವೇಶದಲ್ಲಿ ಬಗರ್‍ಹುಕುಂ ಸಾಗೊವಳಿ ಚೀಟಿ, ಅರಣ್ಯ ಹಕ್ಕು ಕಾಯ್ದೆಯಡಿ ಜಮೀನು ಪತ್ರ, ವಿವಿಧ ನಿಗಮಗಳ ಸಾಲ ಸೌಲಭ್ಯ, ಕೃಷಿ ಇಲಾಖೆಯಿಂದ ಕೃಷಿ ಯಂತ್ರೋಪಕರಣ ವಿತರಣೆ, ವಿಧವಾ ವೇತನ, ವೃದ್ಧಾಪ್ಯ ವೇತನದಂತಹ ಸೌಲಭ್ಯಗಳನ್ನು ವಿತರಿಸಲಾಗುವುದು ಎಂದು ಹೇಳಿದರು.  ಇದರೊಂದಿಗೆ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ, ಸಾವಿರಾರು ಕೋಟಿ ರೂ.ಗಳ ನೂತನ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದ್ದು, ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ನಟಿ ರುಷಿಕಾ ಪಾಲ್ಗೊಳ್ಳಲಿದ್ದಾರೆ ಎಂದರು.  14ರಂದು ಸಂಜೆ ಗಾಯಕ ಸಂಭ್ರಮ, 15ರಂದು ಹಂಸಲೇಖ ನೇತೃತ್ವದಲ್ಲಿ ಕಿರುಚಿತ್ರ ಸೇರಿತಂತೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ಆಂಜನೇಯ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin