ಐವರು ಕುಖ್ಯಾತ ದರೋಡೆಕೋರರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arreast

ಹಗರಿಬೊಮ್ಮನಹಳ್ಳಿ, ಅ.6- ವಿವಿಧ ದರೋಡೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಐವರು ಕುಖ್ಯಾತ ದರೋಡೆಕೋರರನ್ನು ಬೆಣ್ಣೆಕಲ್ಲು ಅರಣ್ಯ ಪ್ರದೇಶದಲ್ಲಿ ಬಂಧಿಸಿ ಅವರಿಂದ 25 ಗ್ರಾಂ ಚಿನ್ನ, 10 ಮೊಬೈಲ್ ಹಾಗೂ 2 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ತಿರುಮನಾಯಕ್, ಗುಂಡ್ಯನಾಯಕ್, ನನ್ನು ನಾಯಕ್, ಶಿವ ನಾಯಕ್ ಹಾಗೂ ಪ್ರಕಾಶ್ ನಾಯಕ್ ಬಂಧಿತ ದರೋಡೆಕೋರರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇಮಿಸಿದ್ದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ದರೋಡೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಯಾವ್ಯಾವ ಸ್ಥಳಗಳಲ್ಲಿ ದರೋಡೆ ಮಾಡಿದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಈ ಸಂಬಂಧ ಹಗರಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin