‘ಒಂದೂವರೆ ವರ್ಷದಲ್ಲಿ ರಾಜ್ಯದ ಎಲ್ಲ ಬಡವರಿಗೆ ಸೂರು’

ಈ ಸುದ್ದಿಯನ್ನು ಶೇರ್ ಮಾಡಿ

Krishnappa

ಬೆಂಗಳೂರು,ಅ.10-ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯದ ಎಲ್ಲ ಬಡವರಿಗೂ ಸೂರು ಕಲ್ಪಿಸುವ ಗುರಿ ಹೊಂದಿರುವುದಾಗಿ ವಸತಿ ಸಚಿವ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.  ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಆಯುಧ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒತ್ತುವರಿ ತೆರವು ಮಾಡಿರುವ ಜಾಗವನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೀಡಲಾಗಿದ್ದು, ಆ ಜಾಗದಲ್ಲಿ ನಗರದ ಬಡವರಿಗೆ 40 ಸಾವಿರ ನಿವೇಶನ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದರು.  ಗ್ರಾಮೀಣ ಭಾಗದಲ್ಲಿ ಸೂರಿಲ್ಲದವರಿಗೆ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಹೆಸರಿನಲ್ಲಿ 20 ಸಾವಿರ ಮನೆ ನಿರ್ಮಾಣ ಮಾಡಲಾಗುವುದು. ಗೃಹ ಮಂಡಳಿ ಮೂಲಕ ನಗರದ ವಸತಿ ರಹಿತರಿಗೆ ನಿವೇಶನ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಮುಂದಿನ ಒಂದೂವರೆ ವರ್ಷದಲ್ಲಿ ಆರೂವರೆ ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ. ಕಳೆದ ಮೂರುವರೆ ವರ್ಷದಲ್ಲಿ ನಮ್ಮ ಸರ್ಕಾರ ಎಂಟು ಲಕ್ಷ ಮನೆಗಳನ್ನು ನಿರ್ಮಿಸಿದೆ ಎಂದರು.
ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಇದೇ ಜಿಲ್ಲೆಯ ಉಸ್ತುವಾರಿ ನೀಡಬೇಕೆಂದು ಬೇಡಿಕೆ ಇಟ್ಟಿಲ್ಲ. ಮಂಡ್ಯ ಅಥವಾ ರಾಮನಗರ ಜಿಲ್ಲಾ ಉಸ್ತುವಾರಿ ನೀಡಿದರೆ ಜವಾಬ್ದಾರಿ ನಿಭಾಯಿಸಲು ಸಿದ್ದರಿರುವುದಾಗಿ ಕೃಷ್ಣಪ್ಪ ತಿಳಿಸಿದರು.  ರಾಮನಗರ-ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ಪಕ್ಷದ ಹೈಕಮಾಂಡ್ ತಮಗೆ ಸಚಿವ ಸ್ಥಾನ ನೀಡಿದೆ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin