ಒಂದೇ ಕಂತಿನಲ್ಲಿ ದಸರಾ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಜಿಲ್ಲಾಧಿಕಾರಿ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

dasara--mysore

ಮೈಸೂರು, ಜ.29- ಒಂದೇ ಕಂತಿನಲ್ಲಿ ದಸರಾ ಅನುದಾನವನ್ನು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿ ರಂದೀಪ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2018ರ ಮೈಸೂರು ದಸರಾ ಮಹೋತ್ಸವದ ಆರಂಭಕ್ಕಿಂತ ಎರಡು ತಿಂಗಳು ಮುಂಚೆ ಒಂದೇ ಕಂತಿನಲ್ಲಿ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಯವರು ರಾಜ್ಯ ಸರ್ಕಾರದ ಪ್ರಧಾನಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. 2017ರ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ದಸರಾ ಉನ್ನತಮಟ್ಟದ ಸಮಿತಿ ಸಭೆಯಲ್ಲಿ 15 ಕೋಟಿ ರೂ. ಅನುದಾನ ನಿಗದಿ ಪಡಿಸಲಾಗಿತ್ತು.
ಕಳೆದ 2017ರ ಸೆಪ್ಟೆಂಬರ್‍ನಲ್ಲಿ ಮೊದಲ ಕಂತಿಗೆ 4.5 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನುಳಿದ 10.45 ಕೋಟಿ ರೂ. ಇನ್ನೂ ಬಿಡುಗಡೆ ಆಗಿಲ್ಲ. ದಸರಾ ಸಂದರ್ಭದಲ್ಲಿ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರು, ಉಪ ಸಮಿತಿಗಳ ಕಾರ್ಯದರ್ಶಿಗಳ ಅನುದಾನ ಮತ್ತು ಬಿಲ್ಲನ್ನು ಪಾವತಿಸುವಂತೆ ಜಿಲ್ಲಾಧಿಕಾರಿಗಳಿಗೆ ಪದೇ ಪದೇ ಮನವಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರ್ಜಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಮಾಧ್ಯಮಗಳ ಗಮನಕ್ಕೆ ತಂದಿದ್ದಾರೆ.

Facebook Comments

Sri Raghav

Admin