ಒಂದೇ ದೇಶ, ಒಂದೇ ಚುನಾವಣೆ ಕುರಿತು ಪ್ರಧಾನಿ ಮೋದಿ ಪ್ರಸ್ತಾವಕ್ಕೆ ರಾಷ್ಟ್ರಪತಿ ಬೆಂಬಲ

ಈ ಸುದ್ದಿಯನ್ನು ಶೇರ್ ಮಾಡಿ

Modi

ನವದೆಹಲಿ, ಸೆ.6 – ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಸ್ತಾವನೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಬೆಂಬಲ ಸೂಚಿಸಿದ್ದಾರೆ. ಇದರೊಂದಿಗೆ ಒಂದೇ ದೇಶ-ಒಂದೇ ಚುನಾವಣೆ ವ್ಯವಸ್ಥೆ ಜರಿಗೆ ಬರುವ ಸಾಧ್ಯತೆಗೆ ಪುಷ್ಠಿ ದೊರೆತಂತಾಗಿದೆ. ರಾಜಧಾನಿಯಲ್ಲಿ ನಿನ್ನೆ ಶಿಕ್ಷಕರ ದಿನಾಚರಣೆ ಸಮಾರಂಭವೊಂದಲ್ಲಿ ಮಾತನಾಡಿದ ರಾಷ್ಟ್ರಪತಿ ಅವರು, ಚುನಾವಣೆ ಸುಧಾರಣೆಗಾಗಿ ಏಕಕಾಲಕ್ಕೆ ಚುನಾವಣೆ ನಡೆಸಬೇಕೆಂಬ ಮೋದಿ ಅವರ ಆಲೋಚನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರಲ್ಲದೇ, ನೀತಿ ಸಂಹಿತೆಯಲ್ಲಿ ಬದಲಾವಣೆ ತರಲು ಬಗ್ಗೆ ಚುನಾವಣಾ ಆಯೋಗವು ಗಮನಹರಿಸಬಹುದಾಗಿದೆ. ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾವನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ನಾವು ಪರಿಗಣಿಸಬೇಕಿದೆ ಎಂದು ಹೇಳಿದ್ದಾರೆ.

ಮೋದಿಯವರು ಸುದ್ದಿವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಚುನಾವಣೆ ಸುಧಾರಣೆ ಬಗ್ಗೆ ಪ್ರಸ್ತಾಪಿಸಿ, ಭಾರತದಲ್ಲಿ ಒಂದೇ ಸಾರ್ವತ್ರಿಕ ಚುನಾವಣೆ ನಡೆಯಬೇಕು. ಇದರಿಂದ ಎಲ್ಲ ರಾಜ್ಯಗಳು ಒಟ್ಟಿಗೆ ಮತದಾನ ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದ್ದರು. ಈಗ ಅವರ ಈ ಅಭಿಪ್ರಾಯಕ್ಕೆ ರಾಷ್ಟ್ರಪತಿಯವರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಅಗಾಗ ಚುನಾವಣೆಗಳು ನಡೆಯುವುದರಿಂದ ಆಡಳಿತದ ಮೇಲೆ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಪಂಚಾಯಿತಿಗಳು, ಸ್ಥಳೀಯ ಸಂಸ್ಥೆಗಳು, ವಿಧಾನಸಭೆ ಮತ್ತು ಲೋಕಸಭೆಗಳಿಗೆ ಏಕಕಾಲದಲ್ಲಿ ಮತದಾನ ನಡೆದರೆ, ಹಣ ಮತ್ತು ಸಮಯ ಉಳಿತಾಯವಾಗುತ್ತದೆ ಎಂದು ಮೋದಿ ಅವರು ಅಭಿಪ್ರಾಯಪಟ್ಟಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin