ಒಕ್ಕಲಿಗರ ಬಿಕ್ಕಟ್ಟು ತಾತ್ಕಾಲಿಕ ಶಮನ, ವಾರದೊಳಗೆ ಸಂಘಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

Vakkaligara-Sangha

ಬೆಂಗಳೂರು, ಫೆ.22-ರಾಜ್ಯ ಒಕ್ಕಲಿಗರ ಸಂಘದ ಬಿಕ್ಕಟ್ಟು ತಾತ್ಕಾಲಿಕವಾಗಿ ಶಮನಗೊಂಡಿದೆ. ನಿನ್ನೆ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಒಕ್ಕಲಿಗರ ಮುಖಂಡರಾದ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಆರ್.ಅಶೋಕ್, ಚಲುವರಾಯಸ್ವಾಮಿ, ಶಾಸಕ ಬಾಲಕೃಷ್ಣ, ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ, ಮಾಜಿ ಅಧ್ಯಕ್ಷ ಅಪ್ಪಾಜಿಗೌಡ ಮತ್ತು ನಿರ್ದೇಶಕರಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.  ಒಂದು ವಾರದೊಳಗೆ ಒಕ್ಕಲಿಗರ ಸಂಘಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡುವುದು. ಅಲ್ಲಿಯವರೆಗೂ ಹಾಲಿ ಪದಾಧಿಕಾರಿಗಳನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ.

ಹಾಲಿ ಅಧ್ಯಕ್ಷರಾದ ಬೆಟ್ಟೇಗೌಡ ಅವರನ್ನು ಪದಚ್ಯುತಿಗೊಳಿಸಿ ಮತ್ತೆ ಚುನಾವಣೆಗೆ ದಿನಾಂಕ ನಿಗದಿಪಡಿಸಿದ್ದ ಕ್ರಮಕ್ಕೆ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ತಡೆಯಾಜ್ಞೆ ನೀಡಲಾಗಿದ್ದರಿಂದ ಇಂದು ನಡೆಯಬೇಕಿದ್ದ ಚುನಾವಣೆ ನಡೆಯಲಿಲ್ಲ. ಮಾತುಕತೆ ಮೂಲಕ ಒಕ್ಕಲಿಗರ ಸಂಘದ ಬಿಕ್ಕಟ್ಟನ್ನು ಬಗೆಹರಿಸುವ ಪ್ರಯತ್ನಕ್ಕೆ ಯಶಸ್ಸು ದೊರೆತಂತಾಗಿದೆ.  ಮೆಡಿಕಲ್ ಮತ್ತು ಎಂಜಿನಿಯರಿಂಗ್ ಸೀಟುಗಳ ಪ್ರವೇಶವನ್ನು ಆದಿಚುಂಚನಗಿರಿ ಶ್ರೀಗಳ ಮಾರ್ಗದರ್ಶನದಲ್ಲಿ ಮಾಡಬೇಕು ಎಂದು ತೀರ್ಮಾನಿಸಲಾಗಿದೆ. ಅಲ್ಲದೆ, ಸಿಬ್ಬಂದಿ ನೇಮಕ, ಪ್ರವೇಶಾತಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಮೂವರ ನೇತೃತ್ವದ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.  ಈ ಎಲ್ಲಾ ತೀರ್ಮಾನಕ್ಕೆ ಉಭಯ ಬಣಗಳು ಒಪ್ಪಿವೆ. ಈ ಸಮ್ಮತಿಯಿಂದ ಒಕ್ಕಲಿಗರ ಸಂಘದ ಬಿಕ್ಕಟ್ಟು ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin