ಒಕ್ಕಲಿಗರ ಸಂಘದ ಚುನಾವಣೆ : ನೂತನ ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Bettegowda-Okkaligara-Sangh

ಬೆಂಗಳೂರು, ಜ.18- ಇಂದು ನಡೆದ ರಾಜ್ಯ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ಆಯ್ಕೆಯಾಗಿದ್ದಾರೆ. ಪದಚ್ಯುತ ಅಧ್ಯಕ್ಷ ಅಪ್ಪಾಜಿಗೌಡ ಕಣದಿಂದ ಹಿಂದೆ ಸರಿದರೆ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿದ್ದ ಡಾ.ಕೆ.ಮಹದೇವ್ ಬಣ ಬದಲಾಯಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದರು.
ನಂತರ ನಡೆದ ಮತದಾನದಲ್ಲಿ ಬೆಟ್ಟೇಗೌಡ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಆ.ದೇವೇಗೌಡ, ಡಾ.ಬಿ.ಶಿವಲಿಂಗಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎನ್.ರಾಮಚಂದ್ರ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎ.ಪ್ರಸಾದ್ ಘೋಷಿಸಿದ್ದಾರೆ. ಖಜಾಂಚಿಯಾಗಿ ಎನ್.ರಮೇಶ್ ಆಯ್ಕೆಯಾಗಿದ್ದಾರೆ. ಒಕ್ಕಲಿಗರ ಸಂಘದ 35 ಮಂದಿ ಸದಸ್ಯರು ಮತ ಚಲಾಯಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin