ಒಕ್ಕಲೆಬ್ಬಿಸಿದರೆ ಬೆತ್ತಲೆ ಪ್ರತಿಭಟನೆ : ಕೊಡಗಿನ ದಿಡ್ಡಹಳ್ಳಿ ಹಾಡಿ ನಿವಾಸಿ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Diddalli--023

ಮಡಿಕೇರಿ, ಡಿ.17– ಕೊಡಗಿನ ದಿಡ್ಡಹಳ್ಳಿ ಹಾಡಿ ನಿವಾಸಿಗಳನ್ನು ತೆರವುಗೊಳಿಸಿದರೆ ಬೆತ್ತಲೆ ಪ್ರತಿಭಟನೆ ಮಾಡುವುದಾಗಿ ಇಲ್ಲಿನ ಆದಿವಾಸಿ ಮಹಿಳೆಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ವಾಸ ಮಾಡುತ್ತಿದ್ದಾರೆಂದು ನೂರಾರು ಹಾಡಿ ಜನರನ್ನು ಒಕ್ಕಲೆಬ್ಬಿಸಲಾಗಿದೆ. ನಮಗೆ ಅಲ್ಲಿಯೇ ವಾಸಿಸಲು ಅವಕಾಶ ಕಲ್ಪಿಸಬೇಕೆಂದು ಹಾಡಿ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಬೆತ್ತಲೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ದಿಡ್ಡಹಳ್ಳಿ ಆದಿವಾಸಿಗಳಿಂದ ಅಹೋರಾತ್ರಿ ಧರಣಿ ಮುಂದುವರಿದಿದ್ದು, ಪ್ರತಿಭಟನೆಗೆ ಹಲವು ಸಂಘ-ಸಂಸ್ಥೆಗಳು ಸಾಥ್ ನೀಡಿವೆ. ಚಿತ್ರನಟ ಚೇತನ್, ನಿರ್ದೇಶಕ ಡಾ.ಕೃಷ್ಣಮೂರ್ತಿ ಸೇರಿದಂತೆ ಹಲವರು ಹಾಡಿ ನಿವಾಸಿಗಳ ಧರಣಿಯಲ್ಲಿ ಪಾಲ್ಗೊಂಡು ಇವರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಕೂಡ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಿಡ್ಡಹಳ್ಳಿ ಹಾಡಿಯಲ್ಲಿ ವಾಸ ಮಾಡುತ್ತಿದ್ದ ನೂರಾರು ಜನರನ್ನು ಸರ್ಕಾರ ಒಕ್ಕಲೆಬ್ಬಿಸಿತ್ತು. ಅರಣ್ಯ ಭೂಮಿಯಲ್ಲಿ ಇವರು ವಾಸಿಸುತ್ತಿದ್ದಾರೆ ಎಂಬ ಕಾರಣದಿಂದ ಒಕ್ಕಲೆಬ್ಬಿಸಿದ್ದರು. ಇದನ್ನು ವಿರೋಧಿಸಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ನಿನ್ನೆ ಅವರಿಗೆ ಸೂಕ್ತ ವಸತಿ ಕಲ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರಾದರೂ ಅಧಿಕಾರಿಗಳು ಕಾನೂನು ಪ್ರಕಾರ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.
ಹೀಗಾಗಿ ಹಾಡಿ ನಿವಾಸಿಗಳು ಪ್ರತಿಭಟನೆ ಮುಂದುವರಿಸಿದ್ದು, ಸರ್ಕಾರವೇನಾದರೂ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin