ಒತ್ತುವರಿದಾರರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗ : ಕೋಟ್ಯಂತರ ಮೌಲ್ಯದ ಒತ್ತುವರಿ ಭೂಮಿ ವಶ

ಈ ಸುದ್ದಿಯನ್ನು ಶೇರ್ ಮಾಡಿ

JCB--01

ಬೆಂಗಳೂರು, ಮೇ 27- ಸರ್ಕಾರಿ ಭೂಮಿ ಒತ್ತುವರಿದಾರರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ನಗರ ಜಿಲ್ಲಾಡಳಿತ ಇಂದು ಕುಂಬಳಗೋಡಿನಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ 8 ಎಕರೆ ಪ್ರದೇಶವನ್ನು ವಶಕ್ಕೆ ಪಡೆದುಕೊಂಡಿತು. ಜಿಲ್ಲಾಧಿಕಾರಿ ವಿ.ಶಂಕರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಕುಂಬಳಗೋಡಿನ ಸರ್ವೆ ನಂ.86ರಲ್ಲಿ ವೇಣುಗೋಪಾಲ್ ಎಂಬ ವ್ಯಕ್ತಿ ಒತ್ತುವರಿ ಮಾಡಿಕೊಂಡಿದ್ದ 8 ಎಕರೆ ಪ್ರದೇಶವನ್ನು ವಶಕ್ಕೆ ಪಡೆದುಕೊಂಡರು.ಸ್ಥಳದಲ್ಲಿ ಈ ಸ್ವತ್ತು ಸರ್ಕಾರಕ್ಕೆ ಸೇರಿದ್ದು ಎಂಬ ನಾಮಫಲಕ ಅಳವಡಿಸುವ ಮೂಲಕ ಬೇರೆ ವ್ಯಕ್ತಿಗಳು ಖಾಲಿ ಪ್ರದೇಶವನ್ನು ಒತ್ತುವರಿ ಮಾಡಿಕೊಳ್ಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.   ಅದೇ ರೀತಿ ಕೊತ್ತನೂರು ಸಮೀಪದ ಹಲವಾರು ಹಳ್ಳಿಗಳಲ್ಲಿ 50 ಎಕರೆಗೂ ಹೆಚ್ಚು ಗೋಮಾಳವನ್ನು ಒತ್ತುವರಿದಾರರು ಒತ್ತುವರಿ ಮಾಡಿಕೊಂಡಿದ್ದು, ಅದನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ನೂರಾರು ಎಕರೆ ಪ್ರದೇಶವನ್ನು ಕೆಲವು ಭೂಗಳ್ಳರು ಒತ್ತುವರಿ ಮಾಡಿಕೊಂಡಿದ್ದು, ಅವರ ಪಟ್ಟಿ ಸಿದ್ಧಪಡಿಸಲಾಗಿದ್ದು, ಹಂತ ಹಂತವಾಗಿ ಎಲ್ಲಾ ಒತ್ತುವರಿಯನ್ನು ತೆರವುಗೊಳಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin