ಒತ್ತುವರಿ ಪ್ರಕರಣ ವಿಚಾರಣೆ ಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಸ್ವಾಗತಾರ್ಹ

ಈ ಸುದ್ದಿಯನ್ನು ಶೇರ್ ಮಾಡಿ

amaswamy

ಬೆಂಗಳೂರು, ಆ.31- ಬೆಂಗಳೂರು ನಗರ ಹಾಗೂ ನಗರ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿ ಪ್ರಕರಣಗಳ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿರುವ ಸರ್ಕಾರದ ಕ್ರಮವನ್ನು ಎ.ಟಿ.ರಾಮಸ್ವಾಮಿ ವರದಿ ಅನುಷ್ಠಾನ ಒಕ್ಕೂಟ ವೇದಿಕೆ ಮುಕ್ತಕಂಠದಿಂದ ಸ್ವಾಗತಿಸಿದೆ.  ಈ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ತನಿಖೆಯ ಜಂಟಿ ಸದನ ಸಮಿತಿ ಅಧ್ಯಕ್ಷರಾಗಿ ಎ.ಟಿ.ರಾಮಸ್ವಾಮಿಯವರು 2007ರಲ್ಲಿ ಸರ್ಕಾರಕ್ಕೆ ನೀಡಿದ ವರದಿ ಅನುಷ್ಠಾನವಾಗಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ನೇತೃತ್ವದಲ್ಲಿ ನಗರದ ಪುರಭವನ ಮುಂಭಾಗ ನಡೆದ 30 ದಿನಗಳ ಧರಣಿ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳು ವಿಶೇಷ ಆಸಕ್ತಿ ವಹಿಸಿ ತಡವಾಗಿಯಾದರೂ ವಿಶೇಷ ನ್ಯಾಯಾಲಯ ಸ್ಥಾಪಿಸುವುದು ಸ್ವಾಗತಾರ್ಹ ಕ್ರಮವೆಂದು ವೇದಿಕೆ ಅಧ್ಯಕ್ಷ ಬಿ.ಎಚ್.ಸುರೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲಕ್ಷಾಂತರ ಕೋಟಿ ರೂ.ಗಳ ಮೌಲ್ಯದ ಸರ್ಕಾರಿ ಜಮೀನು ಭೂಗಳ್ಳರ ಪಾಲಾಗಿದ್ದು, ಇಂತಹ ಭೂ ಕಬಳಿಕೆ ದಾವೆಗಳು ಆರು ತಿಂಗಳಲ್ಲಿ ತೀರ್ಮಾನವಾಗಲಿದ್ದು, ಭೂಗಳ್ಳರಿಗೆ ನಡುಕ ಹುಟ್ಟಿಸಿ ಜನಸಾಮಾನ್ಯರ ನ್ಯಾಯಯುತ ಬೇಡಿಕೆಗಳು ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಆಶಯದಂತೆ ವ್ಯವಸ್ಥಿತ ತಾಣವಾಗಬೇಕು. ಇಲ್ಲಿನ ನಿವಾಸಿಗಳು ನೆಮ್ಮದಿಯಿಂದ ಇರುವಂತೆ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ದೊರೆಸ್ವಾಮಿ, ನಿವೃತ್ತ ಲೋಕಾಯುಕ್ತ ಎನ್.ಸಂತೋಷ್ ಹೆಗಡೆ ಮುಂತಾದವರು ನಡೆಸಿದ ಹೋರಾಟಕ್ಕೆ ಪ್ರತಿಫಲ ಸಿಕ್ಕಂತಾಗಿದೆ ಎಂದು ಅವರು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin