ಕಂದಕಕ್ಕೆ ಉರುಳಿ ಬಿದ್ದ ಬಸ್ : 8 ಯಾತ್ರಿಕರ ದುರ್ಮರಣ, 28 ಮಂದಿ ತೀವ್ರ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Bus-Accident--01

ಜಬಲ್ಪುರ್ (ಮಧ್ಯಪ್ರದೇಶ), ಮೇ 21-ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 8 ಯಾತ್ರಿಕರು ಮೃತಪಟ್ಟು, 28 ಮಂದಿ ತೀವ್ರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಿನ್‍ದೋರಿ ಜಿಲ್ಲೆಯಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ.  ಮಧ್ಯಪ್ರದೇಶದ ಜಬಲ್ಪುರದಿಂದ ಅಮರ್‍ಕಂಟಕ್‍ಗೆ 40 ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಜೋಗಿ ಟಿಕಾರಿಯಾ ಗ್ರಾಮದ ಬಳಿ ಪರ್ವತ ಪ್ರದೇಶದಲ್ಲಿ ಅಳವಾದ ಕಂದಕಕ್ಕೆ ಉರುಳಿ ಬಿತ್ತು. ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.



ಈ ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೂ ನಾಲ್ಕು ಮಂದಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 28 ಗಾಯಾಳುಗಳಲ್ಲಿ ಏಳು ಜನರ ಸ್ಥಿತಿ ಗಂಭೀರವಾಗಿದೆ.   ಸಚಿವ ಓಂ ಪ್ರಕಾಶ್ ಧ್ರುವೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಮೃತ ಕುಟುಂಬಕ್ಕೆ ತಲಾ 4 ಲಕ್ಷ ರೂ.ಗಳ ಪರಿಹಾರ ಘೋಷಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin