ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಜಿಲ್ಲಾವಾರು ಪ್ರವಾಸ
ಚಿಕ್ಕಮಗಳೂರು,ಆ.31- ಕಂದಾಯ ಇಲಾಖೆಯನ್ನು ಚುರುಕುಗೊಳಿಸಲು ಇಲಾಖೆಯ ಕಾರ್ಯವೈಖರಿ ಪರೀಕ್ಷೆ ನಡೆಸುವುದಕ್ಕಾಗಿ ಜಿಲ್ಲಾವಾರು ಪ್ರವಾಸ ಕೈಗೊಂಡಿರುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ಸಚಿವರಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪರಿಣಾಮಕಾರಿ ಇರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕೆ ಪ್ರೇರೇಪಣೆ ನೀಡಿ ಕಂದಾಯ ಇಲಾಖೆಗೆ ಚಾಲನೆ ನೀಡುವ ಸಲುವಾಗಿ ನಾವು ಎಲ್ಲ ಜಿಲ್ಲೆಗೆ ತೆರಳಿ ಪರಿಶೀಲಿಸುತ್ತಿರುವುದಾಗ ತಿಳಿಸಿದರು.
ಬಗರ್ ಹುಕ್ಕಂ ಯೋಜನೆಯ ಅರ್ಜಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸಂಕಲ್ಪ ಹೊಂದಿದ್ದು , ಅದಕ್ಕೆ ಬದ್ದನಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನಧಿಕೃತವಾಗಿ ಕಟ್ಟಿಕೊಂಡಿರುವ ಯೋಜನೆಗಳನ್ನು ಸಕ್ರಮಗೊಳಿಸಲು ನಿರ್ಧಾರ ಕೈಗೊಂಡಿದ್ದು, ಗ್ರಾಮಾಂತರ ಪ್ರದೇಶಕ್ಕೆ ಇನ್ನು ಒಂದು ತಿಂಗಳ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದರು.
ನಂತರ ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ಕಂದಾಯ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದರು.
► Follow us on – Facebook / Twitter / Google+