ಕಟ್ಟಡ ತೆರವು ವೇಳೆ ಕಲ್ಲು ತೂರಾಟ, ಭಟ್ಕಳ ಉದ್ವಿಗ್ನ
ಈ ಸುದ್ದಿಯನ್ನು ಶೇರ್ ಮಾಡಿ
ಭಟ್ಕಳ, ಸೆ.14-ಏಕಾಏಕಿ ಅಂಗಡಿ ತೆರವುಗೊಳಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಾರ್ವಜನಿಕರು ಪುರಸಭೆ ಕಟ್ಟಡಕ್ಕೆ ಕಲ್ಲು ತೂರಾಡಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪುರಸಭೆಗೆ ಸೇರಿದ ಮಳಿಗೆಗಳನ್ನು ಅಧಿಕಾರಿಗಳು ತೆರವುಗೊಳಿಸಲು ಮುಂದಾದರು. ಈ ವೇಳೆ ಒಬ್ಬ ಅಂಗಡಿ ಮಾಲೀಕ ರಾಮಚಂದ್ರನಾಗಪ್ಪ ನಾಯ್ಕ ಎಂಬುವರು ಅಂಗಡಿ ತೆರವು ವಿರೋಧಿಸಿ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದರು. ಇದರಿಂದ ರೊಚ್ಚಿಗೆದ್ದ ಜನ ಅಂಗಡಿ ತೆರವು ಕಾರ್ಯವನ್ನು ನಿಲ್ಲಿಸುವಂತೆ ಆಗ್ರಹಿಸಿದರು.
ಅಲ್ಲದೆ, ಪುರಸಭೆ ಕಟ್ಟಡಕ್ಕೆ ಕಲ್ಲು ತೂರಾಟ ನಡೆಸಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Facebook Comments