ಕಣಿವೆಯಲ್ಲಿ ಈಗಲೂ ಸಕ್ರಿಯರಾಗಿದ್ದಾರೆ 300 ಉಗ್ರರು : ಆತಂಕದಲ್ಲಿ ಜಮ್ಮು- ಕಾಶ್ಮೀರ

ಈ ಸುದ್ದಿಯನ್ನು ಶೇರ್ ಮಾಡಿ

Kashmir-0021

ಶ್ರೀನಗರ, ನ.6-ಒಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಅತ್ಯಂತ ಆತಂಕದಲ್ಲಿದೆ ಎಂದು ಹೇಳಿರುವ ರಾಜ್ಯ ಪೊಲೀಸ್ ಮಹಾ ನಿರೀಕ್ಷಕ ಕೆ.ರಾಜೇಂದ್ರ, ಕಣಿವೆ ರಾಜ್ಯದಲ್ಲಿ 300ಕ್ಕೂ ಹೆಚ್ಚು ಭಯೋತ್ಪಾದಕರು ಮತ್ತು ಉಗ್ರರು ಈಗಲೂ ಸಕ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಪೂಂಚ್ ವಲಯದ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಉಗ್ರಗಾಮಿಗಳ ಎರಡು ಒಳನುಸುಳುವಿಕೆ ಯತ್ನಗಳನ್ನು ಸೇನೆ ವಿಫಲಗೊಳಿಸಿದೆ.

ಕಾಶ್ಮೀರ ಕಣಿವೆಯ ವಾಸ್ತವ ಚಿತ್ರಣವನ್ನು ತೆರೆದಿಟ್ಟಿರುವ ಡಿಜಿಪಿ ರಾಜೇಂದ್ರ, ಪಾಕಿಸ್ತಾನಿ ಸೇನಾಪಡೆಗಳ ಕುಮ್ಮಕ್ಕಿನಿಂದ ಗಡಿಯುದ್ದಕ್ಕೂ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ನುಸುಳುವಿಕೆ ನಿರಂತರವಾಗಿ ಮುಂದುವರೆದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅಧ್ಯಕ್ಷತೆಯಲ್ಲಿ ನಿನ್ನೆ ರಾತ್ರಿ ನಡೆದ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಗಂಭೀರ ಸ್ಥಿತಿ ತಲೆದೋರಿರುವ ಬಗ್ಗೆ ಖಚಿತಪಡಿಸಿದರು. ಏತನ್ಮಧ್ಯೆ, ಕಳೆದ ಕೆಲವು ದಿನಗಳಿಂದ ತಣ್ಣಗಿದ್ದ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಹೆಚ್ಚುವರಿ ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin