ಕದಿರೇಶನ್ ಹತ್ಯೆ ಮಾಡಿದ ಆರೋಪಿಗಳ ಬಂಧನಕ್ಕೆ ಶೆಟ್ಟರ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

shettar

ಬೆಂಗಳೂರು, ಫೆ.8- ಮಾಜಿ ಕಾರ್ಪೊರೇಟರ್ ಕದಿರೇಶ್ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಹತ್ಯೆ ಹಿಂದಿನ ಕಾರಣವನ್ನು ಪತ್ತೆ ಹಚ್ಚಬೇಕೆಂದು ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಯಾದ ಮಾಜಿ ಕಾರ್ಪೊರೇಟರ್ಕದಿರೇಶ್ ವಿಚಾರವನ್ನು ಸದನದಲ್ಲೂ ಪ್ರಸ್ತಾಪಿಸುತ್ತೇವೆ. ಈಗಾಗಲೇ ಕಾನೂನು ಸುವ್ಯವಸ್ಥೆ ಕುರಿತಂತೆ ಸದನದಲ್ಲಿ ಪ್ರಸ್ತಾಪ ಮಾಡಿದ್ದೇª ಎಂದ ಅವರು ಹಿಂದೂ ಮುಖಂಡರ ಹತ್ಯೆಗಳು ನಡೆಯುತ್ತಿವೆ ಎಂದು ವಿಷಾಧಿಸಿದರು.

ಗಾರ್ಡನ್‍ಸಿಟಿ ಎಂಬ ಹೆಸರಿನಿಂದ ಪ್ರಖ್ಯಾತವಾಗಿದ್ದ ಬೆಂಗಳೂರು ಮರ್ಡರ್ ಸಿಟಿ ಎಂದೆನಿಸಿಕೊಳ್ಳುತ್ತಿದೆ. ಸರಣಿ ಹತ್ಯೆಗಳಿಂದ ಭಯದ ವಾತಾವರಣ ನಿರ್ಮಾಣವಾಗಿದೆ ಎಂದರು. ಮಹದಾಯಿ ನ್ಯಾಯಾಧೀಕರಣದಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸುತ್ತಿದ್ದ ಪಾಲಿನಾರಿಮನ್ ಅವರು  ಅನಾರೋಗ್ಯಕ್ಕೀಡಾಗಿರುವುದರಿಂದ ನ್ಯಾಯಾಧೀಕರಣದಲ್ಲಿ ವಾದಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡುವುದಾಗಿ ಹೇಳಿದರು.
ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ. ಇದಕ್ಕಾಗಿ ಪ್ರತ್ಯೇಕ ವಕೀಲರ ತಂಡವನ್ನು ರಚಿಸುವಂತೆ ಮನವಿ ಮಾಡಲಾಗುವುದು ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin