ಕದ್ದ ದ್ವಿಚಕ್ರ ವಾಹನಗಳಲ್ಲಿ ಸುಲಿಗೆ ಮಾಡುತ್ತಿದ್ದ ಇಬ್ಬರು ಖದೀಮರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Arrested

ಬೆಂಗಳೂರು, ಮೇ 27-ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕದ್ದು ಒಂಟಿಯಾಗಿ ಓಡಾಡುವವರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ರೂ. ಮೌಲ್ಯದ ಮಾಲು ವಶಪಡಿಸಿಕೊಂಡಿದ್ದಾರೆ.  ಪೀಣ್ಯದ ಆಶ್ರಯನಗರ ವಾಸಿ ಪ್ರಶಾಂತ್‍ಕುಮಾರ್(22) ಮತ್ತು ಎಸ್‍ಆರ್‍ಎಸ್ ವಾಸಿ ಮಹದೇವಸ್ವಾಮಿ (19) ಬಂಧಿತ ಆರೋಪಿಗಳು.   ಬಂಧಿತರು ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕದ್ದು ಅದೇ ವಾಹನಗಳಲ್ಲಿ ಸುತ್ತಾಡಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಬೆದರಿಸಿ ಹಣ, ಆಭರಣ, ಮೊಬೈಲ್ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಂದ 10 ಲಕ್ಷ ರೂ. ಮೌಲ್ಯದ 115 ಗ್ರಾಂಚಿನ್ನಾಭರಣ, 9 ದ್ವಿಚಕ್ರ ವಾಹನ, ಆಟೋರಿಕ್ಷಾ, 23 ಮೊಬೈಲ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಗಳ ಬಂಧನದಿಂದ ಸಂಜಯನಗರ, ನಂದಿನಿಲೇಔಟ್, ಮ ಹಾಲಕ್ಷ್ಮಿ ಲೇಔಟ್, ಸುಬ್ರಹ್ಮಣ್ಯನಗರ, ರಾಜಗೋಪಾಲನಗರ, ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಗಳಲ್ಲಿನ 9 ದ್ವಿಚಕ್ರ ವಾಹನ, ಒಂದು ಆಟೋರಿಕ್ಷಾ, ಸರ ಅಪಹರಣ, 2 ಮನೆ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ.  ಅಲ್ಲದೆ ಸಂಜಯನಗರ, ಸುಬ್ರಹ್ಮಣ್ಯನಗರ, ಮಹಾಲಕ್ಷ್ಮಿಲೇಔಟ್, ನಂದಿನಿ ಲೇಔಟ್, ರಾಜಗೋಪಾಲನಗರ, ಕಾಡುಗೊಂಡನಹಳ್ಳಿ, ಅನ್ನಪೂರ್ಣೇಶ್ವರಿ ನಗರದಲ್ಲಿನ ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.  ಎಸಿಪಿ ಎ.ಆರ್.ಬಡಿಗೇರ್ ಅವರ ನೇತೃತ್ವದಲ್ಲಿ ರಾಜಗೋಪಾಲನಗರ ಠಾಣೆ ಇನ್ಸ್‍ಪೆಕ್ಟರ್ ವಿ.ಜೆ.ಮಿಥುನ್ ಶಿಲ್ಪಿ, ಸಬ್‍ಇನ್ಸ್‍ಪೆಕ್ಟರ್‍ಗಳಾದ ಶರತ್‍ಕುಮಾರ್.ಎಚ್.ಪಿ., ಟಿ.ಎನ್.ಜ್ಞಾನಮೂರ್ತಿ, ಲಿಂಗಾರೆಡ್ಡಿ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ಮಾಲು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin