ಕನ್ನಡದಲ್ಲೇ ಟ್ವೀಟಿಸಿ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

Modi-Kannada

ನವದೆಹಲಿ ನ.01 : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ರಾಜ್ಯದ ಜನರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ.  “ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಮಾಡಿದ ಈ ಟ್ವೀಟ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅವರ ಈ ಟ್ವೀಟು ಸುಮಾರು 3 ಸಾವಿರಕ್ಕಿಂತ ಹೆಚ್ಚು ಲೈಕ್ ಕಂಡಿದೆ ಹಾಗು ಸುಮಾರು 2 ಸಾವಿರಕ್ಕೂ ಹೆಚ್ಚು ಮಂದಿ ರೀಟ್ವೀಟ್ ಮಾಡಿದ್ದು. 3 ಸಾವಿರಕ್ಕಿಂತ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟ್ಟರ್ ಅಕೌಂಟ್’ನಿಂದ ಇಂದು ವಿವಿಧ ರಾಜ್ಯಗಳ ಏಕೀಕರಣದ ದಿನಕ್ಕೆ ಶುಭ ಕೋರಿದ್ದಾರೆ. ಕರ್ನಾಟಕ, ಕೇರಳ, ಮಧ್ಯಪ್ರದೇಶ, ಛತ್ತೀಸ್’ಗಢ, ಹರಿಯಾಣ ಮತ್ತು ಪಂಜಾಬ್’ನ ರಾಜ್ಯೋತ್ಸವಗಳಿಗೆ ಬೆಸ್ಟ್ ಶುಭಾಶಯ ತಿಳಿಸಿದ್ದಾರೆ.

► Follow us on –  Facebook / Twitter  / Google+

 

 

Facebook Comments

Sri Raghav

Admin