ಕನ್ನಡಿಗರ ಮೇಲೆ ತಮಿಳರ ಅಟ್ಟಹಾಸ : ಜಯಾಗೆ ಸಿದ್ದು ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

Jaya

ಬೆಂಗಳೂರು,ಸೆ.12– ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಆಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಗ್ರಹಪೂರ್ವಕ ಪತ್ರ ಬರೆದಿದ್ದಾರೆ.  ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯಬಾರದು. ಎರಡೂ ರಾಜ್ಯಗಳಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್, ತಮಿಳುನಾಡಿನ ಮುಖ್ಯಕಾರ್ಯದರ್ಶಿ ಅವರ ಜತೆ ಮಾತುಕತೆ ನಡೆಸಿದ್ದಾರೆ. ನಮ್ಮ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಕೂಡ ಅಲ್ಲಿನ ಪೊಲೀಸ್ ಮಹಾನಿರ್ದೇಶಕರ ಜತೆ ಮಾತುಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

ನಾನೂ ಕೂಡ ತಮಿಳುನಾಡು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೇನೆ. ತಮಿಳುನಾಡಿನ ಕನ್ನಡಿಗರ ಆಸ್ತಿಪಾಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿ ಪ್ರಕರಣಗಳು ಮರುಕಳಿಸದಂತೆ ಒತ್ತಾಯಪೂರ್ವಕವಾಗಿ ಪತ್ರ ಬರೆದಿದ್ದೇನೆ. ನಮ್ಮ ಜನರೂ ಕೂಡ ಶಾಂತಿ ಕಾಪಾಡಿಕೊಳ್ಳಬೇಕು. ಪ್ರಚೋದನೆ ಒಳಗಾಗಬಾರದು. ಉದ್ರಿಕ್ತರಾಗಬಾರದು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

► Follow us on –  Facebook / Twitter  / Google+

Facebook Comments

Sri Raghav

Admin