ಕನ್ನಡಿಗರ ರಕ್ಷಣೆ ಮಾಡುವುದು ತಮಿಳುನಾಡು ಸರ್ಕಾರದ ಕರ್ತವ್ಯ : ಟಿ.ಬಿ.ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

jaya-chandra

ತುಮಕೂರು, ಸೆ.16- ಕಾವೇರಿ ನೀರಿಗಾಗಿ ತಮಿಳುನಾಡಿನಲ್ಲಿ ಇಂದು ಬಂದ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಕನ್ನಡಿಗರಿಗೆ ರಕ್ಷಣೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರಿಗೆ ರಕ್ಷಣೆ ನೀಡುವುದು ನಿಮ್ಮ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿಗಾಗಿ ತಮಿಳುನಾಡು, ಕರ್ನಾಟಕದ ನಡುವೆ ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರವೇಶ ಮಾಡಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಭೆ ಕರೆದು ವಾಸ್ತವಾಂಶದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು. ಆದರೆ, ಅದನ್ನು ಮಾಡಲಿಲ್ಲ. ಈಗಲೂ ಕೂಡ ಕಾಲ ಮಿಂಚಿಲ್ಲ. ಮೋದಿಯವರು ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿದರು.
ಸುಪ್ರೀಂಕೋರ್ಟ್ ಆದೇಶ ನೀಡಿದ ದಿನವೇ ಮತ್ತೊಂದು ಆದೇಶ ನೀಡಿದೆ. ಅದೇನೆಂದರೆ ಎರಡೂ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಸುಭದ್ರವಾಗಿರಬೇಕು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ, ಜೀವಹಾನಿಗೆ ತೊಂದರೆಯಾಗದಂತೆ ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.ಬಿಜೆಪಿಯ ಜಗದೀಶ್ ಶೆಟ್ಟರ್, ಈಶ್ವರಪ್ಪ, ವಕೀಲ ನಾರಿಮನ್ ಅವರನ್ನು ಬದಲಾಯಿಸಬೇಕೆಂದು ಒತ್ತಡ ಹೇರುತ್ತಿದ್ದಾರೆ. ನೀವೂ ವಕೀಲರಲ್ಲವೆ, ನೀವೇ ನುರಿತ ವಕೀಲರಿದ್ದರೆ ಕರೆದು ತನ್ನಿ. ಅವರಿಗೆ ಆಗುವ ಖರ್ಚನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಸದ್ಯಕ್ಕೆ ನಾರಿಮನ್ ಅವರನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.ತಮಿಳುನಾಡು ನೀರು ಕೇಳುತ್ತಿರುವುದು ಮುಂದಿನ ಸಾಂಬಾ ಬೆಳೆಗೆ. ಆದರೆ, ಈಗ ಅಲ್ಲಿ ಕಟಾವು ನಡೆಯುತ್ತಿದೆ. ನಮಗೆ ಕುಡಿಯಲೂ ನೀರಿಲ್ಲ. ಆದರೂ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪಿಗೆ ನಾವು ಮನ್ನಣೆ ನೀಡಿದ್ದೇವೆ ಎಂದು ಹೇಳಿದರು.

 

► Follow us on –  Facebook / Twitter  / Google+

Facebook Comments

Sri Raghav

Admin