ಕಪ್ಪತ್ತಗುಡ್ಡಕ್ಕೆ ಬೆಂಕಿ ಪ್ರಕರಣ : ಸುಜಲಾನ್ ಕಂಪನಿ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಕೇಸ್

ಈ ಸುದ್ದಿಯನ್ನು ಶೇರ್ ಮಾಡಿ

Kappattagudda

ಗದಗ, ಮಾ.7-ಕಪ್ಪತಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಲಾನ್ ಪವನ ವಿದ್ಯುತ್ ಕಂಪೆನಿ ಹಾಗೂ ಇತರೆ ಮೂವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣ ಉದುಪುಡಿ ತಿಳಿಸಿದ್ದಾರೆ.ಜಂಟಿ ಪತ್ರಿಕಾಗೋಷ್ಠಿಯಲ್ಲಿ ಇಂದು ಇಲ್ಲಿ ಮಾತನಾಡಿದ ಅವರು ಪ್ರಸ್ತುತ ಕಪ್ಪತಗುಡ್ಡದ ಸುಮಾರು 20 ಹೆಕ್ಟೇರ್ ಪ್ರದೇಶದಲ್ಲಿದ್ದ ಮರಗಳು, ಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿಯಾಗಿದ್ದು, ಮುಂದೆ ಈ ರೀತಿಯ ಯಾವುದೇ ದುರಂತ ಘಟನೆಗಳು ನಡೆಯದಂತೆ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.ಬೇಸಿಗೆ ಮುಗಿಯುವವರೆಗೂ ಈ ವ್ಯಾಪ್ತಿಗೆ ಬರುವ ಅರಣ್ಯ ಪ್ರದೇಶಗಳಲ್ಲಿ ಅಳವಡಿಸಿರುವ ಪವನ್ ವಿದ್ಯುತ್ ಸೇರಿದಂತೆ ಹಲವು ಯೋಜನೆಗಳ ಕಂಪೆನಿಗಳು ಕಾಡಿಗೆ ಬೆಂಕಿ ಬೀಳದಂತೆ ಮುನ್ನೆಚ್ಚರಿಕೆ ವಹಿಸಲು ಅರಣ್ಯ ಇಲಾಖೆಗೆ ತಮ್ಮ ಸಿಬ್ಬಂದಿಗಳನ್ನು ನೀಡಿ ಸಹಕರಿಸಬೇಕು.ಇಲ್ಲವಾದರೆ ಅವರ ಪರವಾನಗಿಯನ್ನು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೈನಿಂಗ್ ಹಾಗೂ ಪವನ ವಿದ್ಯುತ್ ಉತ್ಪಾದನೆಗಾಗಿ ಸಾಕಷ್ಟು ಲಾಬಿಗಳು ನಡೆಯುತ್ತಿದ್ದು, ಇದರ ವಿರುದ್ಧ ಸ್ಥಳೀಯರು ಹೋರಾಟ ನಡೆಸುತ್ತಿದ್ದರು. ಕಪ್ಪತಗುಡ್ಡದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹರಡಿ ಪರಿಸ್ಥಿತಿ ಹದಗೆಟ್ಟಿತ್ತು. ಆದರೆ, ಇತ್ತೀಚೆಗೆ ಅದಕ್ಕೆ ಬೆಂಕಿ ಹಚ್ಚಿ ಕೆಲವು ದುಷ್ಕರ್ಮಿಗಳು ದುಸ್ಸಾಹಸ ಮೆರೆದಿದ್ದರು. ಕೊನೆಗೂ ಸರ್ಕಾರ ಎಚ್ಚೆತ್ತುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವುದು ಸದ್ಯದ ಮಟ್ಟಿಗೆ ನಮಗೆ ನೆಮ್ಮದಿ ತಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಕಾಡಿಗೆ ಬೆಂಕಿ ಅದನ್ನ ಕಾಡ್ಗಿಚ್ಚು ಎಂದು ನಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಮುಂದೆ ಈ ರೀತಿ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ಅರಣ್ಯ ಇಲಾಖೆ ಇಂತಹ ಕುಚೋದ್ಯ ನಡೆಸುವಂತಹವರಿಗೆ ತಕ್ಕ ಶಿಕ್ಷೆ ನೀಡಲು ಸನ್ನದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin