ಕಪ್ಪು ಹಣವನ್ನು ಬಿಳಿಹಣವನ್ನಾಗಿ ಪರಿವರ್ತಿಸುವ ಕಾಳಧನಿಕರನ್ನು ಸುಮ್ಮನೆ ಬಿಡುವುದಿಲ್ಲ
ಈ ಸುದ್ದಿಯನ್ನು ಶೇರ್ ಮಾಡಿ
ನವದೆಹಲಿ, ಡಿ.2-ಕಾಳಧನವನ್ನು ಬಿಳಿಹಣವನ್ನಾಗಿ ಪರಿವರ್ತಿಸುವ ದಂಧೆಯಲ್ಲಿ ತೊಡಗಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹಣಕಾಸು ಸಚಿವಾಲಯ ಎಚ್ಚರಿಕೆ ನೀಡಿದೆ. ಹಣಕಾಸು ಅವ್ಯವಹಾರಗಳನ್ನು ನಡೆಸುವ, ದುರ್ಬಳಕೆ ಮಾಡುವ ಮತ್ತು ತಮ್ಮ ಕಾಳಧನವನ್ನು ವಾಮಮಾರ್ಗಗಳ ಮೂಲಕ ಅಧಿಕೃತಗೊಳಿಸಲು ಯತ್ನಿಸುವ ಮಂದಿ ಎಷ್ಟೇ ಪ್ರಭಾವಿಗಳಾಗಿದ್ದರೂ ಅವರು ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಈಗಾಗಲೇ ಇಂಥ ಅಕ್ರಮಗಳ ವಿರುದ್ಧ ಬಿರುಸಿನ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಟ್ವಿಟರ್ನಲ್ಲಿ ಹೇಳಿದ್ದಾರೆ.
> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… : Eesanje News 24/7 ನ್ಯೂಸ್ ಆ್ಯಪ್ – Click Here to Download
Facebook Comments