ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಮೇಘರಿಕ್ ಭೇಟಿ : ಅಧಿಕಾರಿಗಳ ಜೊತೆ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Police-0
ಬೆಂಗಳೂರು, ಅ.17- ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಹಿನ್ನೆಲೆಯಲ್ಲಿ ಇಂದು ನಗರ ಪೊಲೀಸ್ ಆಯುಕ್ತ ಮೇಘರಿಕ್ ಅವರು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸಭೆ ವೇಳೆ ತನಿಖೆಯ ಪ್ರಗತಿ, ಆರೋಪಿಗಳ ಸುಳಿವು ಸಿಕ್ಕಿದೆಯೇ, ಯಾರು ಈ ಕೊಲೆ ಮಾಡಿರಬಹುದು ಎಂಬಿತ್ಯಾದಿ ವಿಷಯಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆಯುಕ್ತರು, ಕೆಲವು ಸಲಹೆ-ಸೂಚನೆಗಳನ್ನು ನೀಡಿದರು.ಸಭೆಯಲ್ಲಿ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಹರಿಶೇಖರನ್, ಡಿಸಿಪಿ ಸತೀಶ್‍ಕುಮಾರ್ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

 

 

► Follow us on –  Facebook / Twitter  / Google+

Facebook Comments

Sri Raghav

Admin