ಕರವೇ ಕಾರ್ಯಕರ್ತರಿಂದ ಮೆಟ್ರೋ ನಿಲ್ದಾಣದಲ್ಲಿನ ಹಿಂದಿ ನಾಮಫಲಕ ತೆರೆವು ಕಾರ್ಯಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

CM-Siddaramai--01

ಬೆಂಗಳೂರು, ಜು.4- ಮೆಟ್ರೋ ನಿಲ್ದಾಣಗಳಲ್ಲಿ ಹಾಕಲಾಗಿರುವ ಹಿಂದಿ ನಿಲ್ದಾಣಗಳಿಗೆ ನಾಮಫಲಕಗಳನ್ನು ಸರ್ಕಾರ ತೆರವುಗೊಳಿಸದಿದ್ದರೆ ಕರವೇ ಕಾರ್ಯಕರ್ತರೇ ಮುತ್ತಿಗೆ ಹಾಕಿ ಹಿಂದಿ ನಾಮಫಲಕ ತೆರವು ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಘಟನೆಯ ನಿಯೋಗದೊಂದಿಗೆ ಭೇಟಿ ಮಾಡಿದ ನಾರಾಯಣಗೌಡ ಹಿಂದಿ ನಾಮಫಲಕ ಹಾಕಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು ರಾಜ್ಯಗಳಲ್ಲಿ ಹಿಂದಿ ನಾಮಫಲಕ ಹಾಕಿಲ್ಲ. ಸ್ಥಳೀಯ ಭಾಷೆಗೆ ಆದ್ಯತೆ ನೀಡಲಾಗಿದೆ. ಕರ್ನಾಟಕದಲ್ಲಿ ಹಿಂದಿ ನಾಮಫಲಕ ಹಾಕಿರುವುದೇಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಕೇರಳ- ತಮಿಳುನಾಡನ್ನು ಮಾದರಿಯಾಗಿಟ್ಟುಕೊಂಡು ಬೆಂಗಳೂರಿನಲ್ಲಿರುವ ನಮ್ಮ ಮೆಟ್ರೋದಲ್ಲಿನ ಹಿಂದಿ ನಾಮಫಲಕ ತೆರವಿಗೆ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತು ಮೆಟ್ರೋ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ನಾಮಫಲಕ ತೆರವುಗೊಳಿಸುವ ಸಂಬಂಧ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಾಮಫಲಕ ತೆರವುಗೊಳಿಸುವ ವಿಶ್ವಾಸವಿದೆ. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಕರವೇ ಕಾರ್ಯಕರ್ತರು ಕಾಯಾಚರಣೆ ನಡೆಸುತ್ತಾರೆ.

ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಮುತ್ತಿಗೆ ಹಾಕುತ್ತಾರೆ. ಹಿಂದಿ ನಾಮಫಲಕ ತೆರವುಗೊಳಿಸಲು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.  ಇದೇ ವೇಳೆ ಹಿರಿಯ ಸ್ವತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin