ಕರಾವಳಿ ನಿರ್ಜನ ದ್ವೀಪಗಳೇ ಭಯೋತ್ಪಾದಕರಿಗೆ ಸುರಕ್ಷಿತ ತಾಣಗಳು..!

ಈ ಸುದ್ದಿಯನ್ನು ಶೇರ್ ಮಾಡಿ

Terrorist-01

ನವದೆಹಲಿ, ಡಿ.9-ಭಾರತ ಸಮುದ್ರದಲ್ಲಿನ ನಿರ್ಜನ ದ್ವೀಪಗಳನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ತಮ್ಮ ಸುರಕ್ಷಿತ ತಾಣಗಳಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಿರುವ ಸಮಿತಿ, ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸುವುದಕ್ಕೆ ಲಷ್ಕರ್ ಉಗ್ರರು ಹೊಸ ಮತ್ತು ಅಸಂಪ್ರದಾಯಿಕ ಮಾರ್ಗಗಳನ್ನು ಅನ್ವೇಷಿಸುತ್ತಿದ್ದಾರೆ. ಇದಕ್ಕಾಗಿ ನಿರ್ಜನ ದ್ವೀಪಗಳನ್ನು ತಮ್ಮ ಸುರಕ್ಷಿತ ತಾಣಗಳನ್ನಾಗಿ ಬಳಸಿಕೊಳ್ಳುವ ತಂತ್ರ ರೂಪಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಲಷ್ಕರ್ ಉಗ್ರರು ಭಾರತದ ಮೇಲೆ ಕರಾವಳಿ ಪ್ರದೇಶದ ಮೂಲಕ ಭಯೋತ್ಪಾದಕ ದಾಳಿ ನಡೆಸುವ ಸಂಚು ರೂಪಿಸುತ್ತಿದ್ದು, ಜನವಸತಿ ಇಲ್ಲದ ದ್ವೀಪಗಳನ್ನು ತಮ್ಮ ಕಾರಾಸ್ತಾನವಾಗಿ ಬಳಸಿಕೊಳ್ಳುವ ಸಾಧ್ಯತೆ ಇರುವ ಬಗ್ಗೆ ಗುಪ್ತಚರ ದಳ ಮಾಹಿತಿ ಸಂಗ್ರಹಿಸಿದೆ.  ಮ್ಯಾನ್ಮಾರ್‍ನಿಂದ ಸಾವಿರಾರು ಸಂಖ್ಯೆಯಲ್ಲಿ ರೋಹಿಂಗ್ಯ ಮುಸ್ಲಿಮರು ಪಲಾಯನ ಮಾಡುತ್ತಿದ್ದಾರೆ. ಅಲ್ಲದೇ ಮ್ಯಾನ್ಮಾರ್ ಮೀನುಗಾರರು ಭಾರತದ ಸಾಗರ ವ್ಯಾಪ್ತಿಯಲ್ಲಿ ಕಳ್ಳಬೇಟೆ ನಡೆಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭದ್ರತೆಗೆ ದೊಡ್ಡ ಮಟ್ಟದ ಆತಂಕ ಉಂಟಾಗಿದೆ ಎಂಬ ಗುಪ್ತಚರ ದಳದ ಮಾಹಿತಿಯನ್ನು ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin