ಕರ್ನಾಟಕಕ್ಕೆ ಕಾಂಗ್ರೆಸ್‍ನಿಂದ ಮುಕ್ತಿನೀಡಿ, ಬಿಜೆಪಿ ಬೆಂಬಲಿಸಿ : ಅಮಿತ್ ಶಾ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah-n-01

ತುಮಕೂರು, ಮಾ.26- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸಿರುವ ದುರಾಡಳಿತವನ್ನು ಕೊನೆಗೊಳಿಸಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದಿಲ್ಲಿ ತಿಳಿಸಿದ್ದಾರೆ. ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಆಡಳಿತದಿಂದ ಜನ ಬೇಸತ್ತಿದ್ದಾರೆ. ಇದರಿಂದ ಮುಕ್ತಿ ಕಾಣಿಸಲು ರಾಜ್ಯದ ಜನತೆ ಬಿಜೆಪಿಯನ್ನು ಆಶೀರ್ವಾದಿಸಿ ಅಧಿಕಾರಕ್ಕೆ ತರುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಅಭಿವೃದ್ಧಿ ಕೆಲಸಗಳೇ ನಮಗೆಲ್ಲಾ ಶ್ರೀರಕ್ಷೆಯಾಗಿದೆ. ಬಿಜೆಪಿ ಅವಧಿಯಲ್ಲಿ ರಾಜ್ಯ ಕಂಡ ಅಭಿವೃದ್ಧಿಯನ್ನು ಗಮನಿಸಿ ಜನ ನಮ್ಮ ಗೆಲುವಿಗೆ ಮುನ್ನುಡಿ ಬರೆಯಲಿದ್ದಾರೆ ಎಂದರು.

ರಾಜ್ಯದ ಉದ್ದಗಲಕ್ಕೂ ನಾವು ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡಲು ಶ್ರೀಗಳ ಆಶೀರ್ವಾದದಿಂದ ಹೆಚ್ಚಿನ ಶಕ್ತಿ ದೊರೆತಿದೆ. ಇಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅನ್ನದಾಸೋಹ ನಿರಂತರವಾಗಿ ನಡೆದಿದೆ. ದೈವ ಸ್ವರೂಪಿಯಾದ ಶ್ರೀಗಳು ದರ್ಶನ ಪಡೆದು ಪುಳಕಿತನಾಗಿದ್ದೇನೆ. ಇದೇ ನಮ್ಮ ಮುಂದಿನ ಕೆಲಸಗಳಿಗೆ ರಕ್ಷೆಯಾಗಲಿದೆ ಎಂದರು. ಮಾಜಿ ಸಚಿವ ಸೊಗಡು ಶಿವಣ್ಣ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಷಾ ಎಲ್ಲರತ್ತ ಕೈ ಬೀಸಿ ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಗ್ಗಟ್ಟಾಗಿ ನಡೆಯಿರಿ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದರು. ಇವರೊಂದಿಗೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವ ಅನಂತಕುಮಾರ್, ಪ್ರಹ್ಲಾದ್ ಜೋಷಿ, ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್, ಹೆಬ್ಬಾಕದ ರವಿ, ನಾಗಣ್ಣ ಮತ್ತಿತರ ಮುಖಂಡರು ಹಾಜರಿದ್ದರು.

Facebook Comments

Sri Raghav

Admin