ಕರ್ನಾಟಕದಲ್ಲಿ ಕಳೆದ 5 ವರ್ಷದಲ್ಲಿ 3,515 ರೈತರ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

Former-Suicide-e01

ಬೆಂಗಳೂರು, ಡಿ.27-ರಾಜ್ಯದಲ್ಲಿ 2013ರ ಏಪ್ರಿಲ್‍ನಿಂದ 2017ರ ನವೆಂಬರ್ ತನಕ 3,515 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಕೃಷಿ ಇಲಾಖೆ ನೀಡಿರುವ ಅಂಕಿ-ಅಂಶದಿಂದ ತಿಳಿದುಬಂದಿದೆ. ಇವರಲ್ಲಿ 2,525 ಮಂದಿ ಬರಗಾಲ ಮತ್ತು ಕೃಷಿ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾರೆ. 2008ರ ಏಪ್ರಿಲ್‍ನಿಂದ 2012ರ ಏಪ್ರಿಲ್ ಅವಧಿಯಲ್ಲಿ 1,125 ರೈತರು ಹಾಗೂ 2015ರ ಏಪ್ರಿಲ್‍ನಿಂದ 2017ರ ಏಪ್ರಿಲ್ ತನಕ 2,514 ಕೃಷಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಈ ವರ್ಷ ಏಪ್ರಿಲ್‍ನಿಂದ ನವೆಂಬರ್‍ವರೆಗೆ ರಾಜ್ಯದಲ್ಲಿ ಸಾಕಷ್ಟು ಮಳೆಯಾಗಿದ್ದರೂ, 624 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರಲ್ಲಿ ಕಬ್ಬು ಬೆಳೆಗಾರರೇ ಹೆಚ್ಚಾಗಿದ್ದಾರೆ. ಹತ್ತಿ ಮತ್ತು ಭತ್ತ ಸಾಗುವಳಿದಾರರು ನಂತರದ ಸ್ಥಾನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಾಕಿ ಇರುವ ಸಾಲ ಮರುಪಾವತಿಗಾಗಿ ರೈತರನ್ನು ಬಲವಂತ ಮಾಡದಂತೆ ಬ್ಯಾಂಕುಗಳಿಗೆ ಸೂಚಿಸಲಾಗಿದ್ದು, ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ. ಅತ್ಯಧಿಕ ಬಡ್ಡಿ ದರಕ್ಕಾಗಿ ಸಾಲ ನೀಡುವ ಖಾಸಗಿ ಲೇವಾದೇವಿದಾರರ ವಿರುದ್ಧ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1,332 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 585 ಮಂದಿಯನ್ನು ಬಂಧಿಸಲಾಗಿದೆ ಎಂದು ಕೃಷಿ ಅಧಿಕಾರಿ ಕುಮಾರಸ್ವಾಮಿ ತಿಳಿಸಿದ್ದಾರೆ.

Facebook Comments

Sri Raghav

Admin