ಕರ್ನಾಟಕದಲ್ಲಿ ತಗ್ಗಿದ ವಾರ್ಧಾ ಚಂಡಮಾರುತದ ಪ್ರಭಾವ

ಈ ಸುದ್ದಿಯನ್ನು ಶೇರ್ ಮಾಡಿ

Bengaluru

ಬೆಂಗಳೂರು, ಡಿ.14- ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾರ್ದಾ ಚಂಡಮಾರುತ ದುರ್ಬಲಗೊಂಡಿದ್ದು, ರಾಜ್ಯದ ಮೇಲಾಗಿದ್ದ ಅದರ ಪ್ರಭಾವವೂ ಕಡಿಮೆಯಾಗುತ್ತ ಹೋಗಿದೆ. ನಾಳೆ ವೇಳೆಗೆ ಮೋಡದ ಪ್ರಮಾಣವೂ ಕೂಡ ಕಡಿಮೆಯಾಗಿ ಬಿಸಿಲು ಬರುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞ ವಿ.ಎಸ್.ಪ್ರಕಾಶ್ ಈ ಸಂಜೆಗೆ ತಿಳಿಸಿದರು. ನಿನ್ನೆಯೂ ಕೂಡ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಅಲ್ಲಲ್ಲೇ ಹಗುರ ಮಳೆಯಾಗುವ ಸಂಭವವಿದೆ.

ಆದರೂ ಇನ್ನೆರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಬೆಂಗಳೂರು, ಹಾಸನ, ಚಿಕ್ಕಮಗಳೂರು, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗಿದೆ. ಚಂಡಮಾರುತದ ಪ್ರಭಾವ ಮುಗಿಯುತ್ತಾ ಬಂದಿದ್ದು, ಮತ್ತೆ ಸದ್ಯಕ್ಕೆ ವಾಯುಭಾರ ಕುಸಿತವಾಗಿ ಚಂಡಮಾರುತ ಸಂಭವಿಸುವ ಲಕ್ಷಣಗಳಿಲ್ಲ. ಹೀಗಾಗಿ ಮತ್ತೆ ಮಳೆ ಬರುವ ಸಾಧ್ಯತೆಗಳು ಅತ್ಯಂತ ವಿರಳ ಎಂದು ಹೇಳಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin