ಕರ್ನಾಟಕದಲ್ಲಿ ಶೇ.36ರಷ್ಟು ಪೊಲೀಸ್ ಹುದ್ದೆಗಳು ಖಾಲಿ, ದೇಶದಲ್ಲೇ ರಾಜ್ಯಕ್ಕೆ 2 ನೇ ಸ್ಥಾನ

ಈ ಸುದ್ದಿಯನ್ನು ಶೇರ್ ಮಾಡಿ

Karnataka-Police-----01

ಬೆಂಗಳೂರು, ಏ.15- ರಾಷ್ಟ್ರೀಯ ಸರಾಸರಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಶೇ.36ರಷ್ಟು ಪೊಲೀಸ್ ಹುದ್ದೆಗಳು ಖಾಲಿ ಇದ್ದು, ದೇಶದಲ್ಲೇ ಎರಡನೆ ಸ್ಥಾನ ಪಡೆದಿದೆ. ದೇಶದಲ್ಲೇ ಅತಿ ದೊಡ್ಡ ರಾಜ್ಯವೆನಿಸಿದ ಉತ್ತರ ಪ್ರದೇಶದಲ್ಲಿ ಶೇ.50ರಷ್ಟು ಪೊಲೀಸ್ ಹುದ್ದೆಗಳು ಖಾಲಿ ಇದ್ದರೆ, ಕರ್ನಾಟಕ ಶೇ.36, ಪಶ್ಚಿಮ ಬಂಗಾಳ ಶೇ.33, ಜಾರ್ಖಂಡ್ ಶೇ.27, ತೆಲಂಗಾಣ ಶೇ.26 ಹಾಗೂ ದೇಶಾದ್ಯಂತ ಶೇ.24ರಷ್ಟು ಹುದ್ದೆಗಳು ಖಾಲಿ ಇವೆ.

ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡದ ಕಾರಣ ಕಳೆದ ವರ್ಷ ರಾಜ್ಯ ಅನೇಕ ಕಹಿ ಘಟನೆಗಳಿಗೆ ಸಾಕ್ಷಿಯಾಯಿತು. ಕಾವೇರಿ ಗಲಭೆ, ಮಹದಾಯಿ ರೈತರ ಹೋರಾಟ, ಗಾರ್ಮೆಂಟ್ಸ್ ನೌಕರರ ಪ್ರತಿಭಟನೆ, ಇತ್ತೀಚೆಗಷ್ಟೆ ಅಂಗನವಾಡಿ ಕಾರ್ಯಕರ್ತರ ಅಹೋರಾತ್ರಿ ಧರಣಿ ಸೇರಿದಂತೆ ಹಲವು ಘಟನೆಗಳು ನಡೆದವು. 14 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಶೇ.50ರಷ್ಟು ಪೆÇಲೀಸ್ ಹುದ್ದೆಗಳು ಖಾಲಿ ಇವೆ. ಮುಖ್ಯಮಂತ್ರಿ ಅಖಿಲೇಶ್ ಯಾದವ್ 5 ವರ್ಷ ಅವಧಿಯಲ್ಲಿ ಕೇವಲ ಎರಡು ಬಾರಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದರು. ಇನ್ನು ಕರ್ನಾಟಕದಲ್ಲಿ ಕಾಲಕಾಲಕ್ಕೆ ಸರ್ಕಾರಗಳು ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಂಡಿದ್ದರೂ ಇಲಾಖೆ ಮುಂದಿಟ್ಟಷ್ಟು ಹುದ್ದೆಗಳನ್ನು ಭರ್ತಿ ಮಾಡದಿರುವುದೇ ಸಮಸ್ಯೆಗೆ ಮೂಲ ಕಾರಣವಾಗಿದೆ.

ರಾಜ್ಯದಲ್ಲಿ ಒಟ್ಟು 1,10,000 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಆದರೆ ಈವರೆಗೂ 7934 ಹುದ್ದೆಗಳನ್ನು ಮಾತ್ರ ತುಂಬಲಾಗಿದೆ. ಸರಿಸುಮಾರು 30ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳು ಖಾಲಿ ಇವೆ.  ರಾಜ್ಯ ಸರ್ಕಾರ ಇತ್ತೀಚೆಗೆ ಕೆಲ ಹುದ್ದೆಗಳನ್ನು ಭರ್ತಿ ಮಾಡಿತ್ತಾದರೂ, ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಈ ವರ್ಷದ ಅಂತ್ಯಕ್ಕೆ 20 ಸಾವಿರ ಹುದ್ದೆಗಳನ್ನು ತುಂಬಲಾಗುವುದು ಎಂದು ಸರ್ಕಾರ ಹೇಳುತ್ತಿದೆಯಾದರೂ ಅದು ಕೇವಲ ಕಾಗದದ ಮೇಲಷ್ಟೇ ಉಳಿದಿದೆ.

ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹುದ್ದೆಗಳನ್ನು ತುಂಬಲು ಅದೇಕೋ ಮೀನಾಮೇಷ ಎಣಿಸುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ಗೋವಾ, ಕೇರಳದಲ್ಲಿ ಶೇ.10ರಿಂದ 15ರಷ್ಟು ಹುದ್ದೆಗಳು ಖಾಲಿ ಇವೆ.  ನಿವೃತ್ತಿ ಹೊಂದಿದ ಬಳಿಕ ಕಾಲ ಮಿತಿಯೊಳಗೆ ಭರ್ತಿ ಮಾಡಿದರೆ ಯಾವ ಸಮಸ್ಯೆಯೂ ಇರುವುದಿಲ್ಲ. ಆದರೆ ಸರ್ಕಾರ ಪೊಲೀಸ್ ಹುದ್ದೆಗಳನ್ನು ವರ್ಷಕ್ಕೆ ಒಂದು ಬಾರಿ ಭರ್ತಿ ಮಾಡಿದರೆ, ಉಳಿದಂತೆ ಎಸ್‍ಐ ಹುದ್ದೆಗಳನ್ನು 2-3 ವರ್ಷ ಹಾಗೂ ಇದಕ್ಕಿಂತ ಮೇಲ್ಪಟ್ಟ ಹುದ್ದೆಗಳನ್ನು 3-4 ವರ್ಷಕ್ಕೊಮ್ಮೆ ನೇಮಕಾತಿಗೆ ಮುಂದಾಗುತ್ತಿರುವುದೇ ಇದಕ್ಕೆ ಮೂಲ ಕಾರಣವಾಗಿದೆ ಎಂಬುದು ಪೊಲೀಸ್ ಇಲಾಖೆ ಅಳಲು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin