ಕರ್ನಾಟಕ ಬಂದ್ಗೆ ನನ್ನ ಪೂರ್ಣ ಬೆಂಬಲವಿದೆ : ಸಂಸದ ಪ್ರತಾಪ್ಸಿಂಹ
ಹುಬ್ಬಳ್ಳಿ, ಸೆ.8-ಕಾವೇರಿ ನೀರಿನ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಹಾಗೂ ತಮಿಳುನಾಡಿಗೆ ರಾಜ್ಯಸರ್ಕಾರ ನೀರು ಹರಿಸುತ್ತಿರುವುದನ್ನು ವಿರೋದಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಂಸದ ಪ್ರತಾಪ್ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ಸಮಸ್ಯೆ ಕುರಿತು ವಕೀಲರು ತಪ್ಪು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾಗ ನಾರಿಮನ್ ಅವರಿಗೆ ವಯಸ್ಸಾಗಿದೆ ಎಂದಿದ್ದರು. ಈಗ ಸ್ವತಃ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ದ್ದಾರೆ. ಈಗ ಏಕೆ ನಾರಿಮನ್ ಅವರನ್ನು ಬದಲಾವಣೆ ಮಾಡಿಲ್ಲ ಎಂದು ಪ್ರಶ್ನಿಸಿದರು.
ಬಂದ್ ವೇಳೆ ಯಾರೂ ತಾಳ್ಮೆ ಕಳೆದುಕೊಳ್ಳಬಾರದು. ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ಅವರು ಮನವಿ ಮಾಡಿದರು. ಮಾಜಿ ಸಂಸದೆ ರಮ್ಯಾ ಹೇಳಿಕೆ ಅಪ್ರಸ್ತುತ. ಮಂಡ್ಯ ಜನರೇ ಅವರನ್ನು ತಿರಸ್ಕರಿಸಿದ್ದಾರೆ ಎಂದು ಇದೇ ವೇಳೆ ಪ್ರತಾಪ್ಸಿಂಹ ಪ್ರತಿಕ್ರಿಯಿಸಿದರು.
► Follow us on – Facebook / Twitter / Google+