ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಿ ಬಸ್ಗಳ ನಡುವೆ : ಐವರು ದುರ್ಮರಣ
ಉಸ್ಮಾನಾಬಾದ್, ಡಿ.23- ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟು, ಅನೇಕರು ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಉಮ್ಮಾಗ್ರಾ ಕ್ರಾಸ್ ಬಳಿ ಸಂಭವಿಸಿದೆ. ಈ ಅಪಘಾತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಮತ್ತು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ) ಬಸ್ಗಳ ಇಬ್ಬರು ಚಾಲಕರೂ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಉಮ್ಮಾರ್ಗಾದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಗಾಣಿಗಾಪುರಕ್ಕೆ ಕೆಎಸ್ಆರ್ಟಿಸಿ ಬಸ್ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಬಸ್ಸು ಅಳಂದ ಡಿಪೋಗೆ ಸೇರಿದೆ. ಉಮ್ಮಾರ್ಗಾ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Eesanje News 24/7 ನ್ಯೂಸ್ ಆ್ಯಪ್ – Click Here to Download