ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮದಿಂದ ಸಿಎಂ ಪರಿಹಾರ ನಿಧಿಗೆ 1.06 ಕೋಟಿ ದೇಣಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Forest

ಬೆಂಗಳೂರು, ಡಿ.26- ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮ ತನ್ನ ಲಾಭಾಂಶದಲ್ಲಿ 1.06ಕೋಟಿ ರೂ.ವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದೆ.  ನಿಗಮದ ಅಧ್ಯಕ್ಷ ಎಸ್.ಇ.ಸುಧೀಂದ್ರ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚೆಕ್ ರೂಪದಲ್ಲಿ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ನಿಗಮ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.   ನಿಗಮದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ಭರವಸೆ ನೀಡಿದರು.

ನಿಗಮ ಕಳೆದ ಸಾಲಿನಲ್ಲಿ 4 ಕೋಟಿ ರೂ. ಲಾಭಗಳಿಸಿತ್ತು. ಈ ವರ್ಷ 6ಕೋಟಿ ಲಾಭಗಳಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1.06ಕೋಟಿ ರೂ.ವನ್ನು ಚೆಕ್ ರೂಪದಲ್ಲಿ ದೇಣಿಗೆ ನೀಡಿರುವುದಾಗಿ ಸುಧೀಂದ್ರ ವಿವರಿಸಿದರು.  ಈ ಸಂದರ್ಭದಲ್ಲಿ ಅರಣ್ಯ ಸಚಿವ ರಮಾನಾಥ ರೈ, ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ದಿ ನಿಗಮದ ಮಾಹಿತಿ ಪುಸ್ತಕವನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಹಾಜರಿದ್ದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download

Facebook Comments

Sri Raghav

Admin