ಕಲಬುರಗಿಯಲ್ಲಿ ಜಿಲ್ಲೆಯಲ್ಲಿ ಧಾರಾಕಾರ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

 

kalaburagi
ಕಲಬುರಗಿ, ಸೆ.15-
ಜಿಲ್ಲೆಯಲ್ಲಿ ದಿಢೀರನೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಸೇತುವೆಗಳು ಮುಳುಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.ಸೇಡಂ ತಾಲೂಕಿನಲ್ಲಿ ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ್ ಸೇತುವೆ ನೀರಿನಲ್ಲಿ ಮುಳುಗಿಹೋಗಿದ್ದು, ನೀರಿನ ರಭಸವಾಗಿ ಹರಿಯುತ್ತಿದೆ. ಸೇತುವೆಗೂ ಕೂಡ ಹಾನಿಯಾಗಿರುವ ಸಾಧ್ಯತೆ ಹೆಚ್ಚಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಒಂದು ಕಿಲೋಮೀಟರ್ ಹಿಂದೆಯೇ ನಿಲ್ಲಿಸಲಾಗಿದೆ.

ಚಿಂಚೋಳಿ ತಾಲೂಕಿನ ತಾಜಲಾಪುರ ಸೇತುವೆ ಕೂಡ ಮುಳುಗಡೆಯಾಗಿದ್ದು, ಅಕ್ಕಪಕ್ಕದ ಸಲಗರ ಬಸಂತಿ ಮತ್ತಿತರ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.ಇದೇ ರೀತಿ ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಧೋ ಎಂದು ಸುರಿಯುತ್ತಿರುವ ಧಾರಾಕಾರ ಮಳೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.ಹಲವು ಭಾಗಗಳಲ್ಲಿ ಗ್ರಾಮಗಳು ಜಲಾವೃತಗೊಂಡಿದ್ದು, ಮಳೆ ನಿಲ್ಲದಿದ್ದರೆ ಮನೆಗಳಿಗೂ ಸಹ ನೀರು ನುಗ್ಗುವ ಸಾಧ್ಯತೆ ಹೆಚ್ಚಾಗಿದ್ದು, ಜಿಲ್ಲಾಡಳಿತ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕಾರ್ಯವನ್ನೂ ಕೂಡ ಕೈಗೊಂಡಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin