ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ ತಜ್ಞರನ್ನೇ ಶಿಕ್ಷಕರನ್ನಾಗಿ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

H.Anjaneya-Session

ಬೆಂಗಳೂರು,ಜೂನ್,15- ರಾಜ್ಯದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಸತಿ ಶಾಲೆಗಳಿಗೆ ಇನ್ನು ಮುಂದೆ ತಜ್ಞರನ್ನೇ ಶಿಕ್ಷಕರನ್ನಾಗಿ ನೇಮಕ ಮಾಡುವುದಾಗಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ವಿಧಾನಸಭೆಗಿಂದು ಹೇಳಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಕೆ.ಕುಮಾರಸ್ವಾಮಿ ಅವರ ಪ್ರಸ್ತಾಪಕ್ಕುತ್ತರಿಸಿದ ಅವರು ಈ ಭರವಸೆ ನೀಡಿದರು. ವಸತಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ.ಉತ್ತಮ ಗುಣಮಟ್ಟದ ಶಿಕ್ಷಕರನ್ನು ನೇಮಕ ಮಾಡುವುದು ಕೂಡಾ ಇದರಲ್ಲಿ ಒಂದು ಎಂದು ಹೇಳಿದರು.

ಇನ್ನು ಮುಂದೆ ವಸತಿ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವಾಗ ಆಯಾ ವಿಷಯಗಳಲ್ಲಿ ತಜ್ಞರಾಗಿರುವವರನ್ನೇ ನೇಮಕ ಮಾಡಿಕೊಳ್ಳುತ್ತೇವೆ.ಆ ಮೂಲಕ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುತ್ತೇವೆ ಎಂದು ಸ್ಪಷ್ಟ ಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin